ADVERTISEMENT

ದಾಂಡೇಲಿ ಸರ್ಕಾರಿ ಆಸ್ಪತ್ರೆಯ ಉನ್ನತಿಕರಣಕ್ಕೆ 5 ಕೋಟಿ ರೂಪಾಯಿ ಮಂಜೂರು: ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 13:09 IST
Last Updated 19 ಜೂನ್ 2025, 13:09 IST
ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಶಾಸಕ ಆರ್.ವಿ.ದೇಶಪಾಂಡೆ ರೋಗಿಗಳಿಗೆ ಹಣ್ಣು ವಿತರಿಸಿ, ನಂತರ ಮಾಧ್ಯಮದೊಂದಿಗೆ ಮಾತನಾಡಿದರು
ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಶಾಸಕ ಆರ್.ವಿ.ದೇಶಪಾಂಡೆ ರೋಗಿಗಳಿಗೆ ಹಣ್ಣು ವಿತರಿಸಿ, ನಂತರ ಮಾಧ್ಯಮದೊಂದಿಗೆ ಮಾತನಾಡಿದರು   

ದಾಂಡೇಲಿ: ‘ಸರ್ಕಾರಿ ಆಸ್ಪತ್ರೆಗೆ ಬಂದವರು ಸಂಪೂರ್ಣ ಗುಣಮುಖರಾಗಿಯೇ ಹೋಗಬೇಕು. ಔಷಧೋಪಚಾರದಲ್ಲಿ ಯಾವುದೇ ಕೊರತೆಯಾಗದಂತೆ ವೈದ್ಯರು ಗಮನಹರಿಸಬೇಕು’ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಜನ್ಮದಿನದ ಪ್ರಯುಕ್ತ ಗುರುವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ಹಣ್ಣು ವಿತರಿಸಿ, ನಂತರ ಮಾತನಾಡಿದರು.

‘ಸರ್ಕಾರಿ ಆಸ್ಪತ್ರೆಯನ್ನು ಉನ್ನತೀರಕಣಕ್ಕೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ₹5 ಕೋಟಿ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಸರ್ವ ಪ್ರಯತ್ನ ಮಾಡಿದ್ದು, ಪ್ರವಾಸೋದ್ಯಮದಲ್ಲಿ ದಾಂಡೇಲಿ ವಿಶ್ವಮಟ್ಟದ ಹೆಸರು ಪಡೆದಿದೆ. ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿಬೇಕು’ ಎಂದರು.

ADVERTISEMENT

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ನಗರಸಭೆ ಅಧ್ಯಕ್ಷ ಆಶ್ಫಾಕ್ ಶೇಖ್, ಉಪಾಧ್ಯಕ್ಷೆ ಶಿಲ್ಪ ಕೊಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ ಜಾಧವ, ತಸವರ ಸೌದಾಗರ, ರವಿ ಚೌಹಾಣ, ಪ್ರಾನ್ಸಿಸ್ ಮಾಸ್ಕರೆನ್ಸ್, ಅನಿಲ ದಂ ಡಗಲ, ಇಕ್ಬಾಲ್ ಶೇಖ್, ದಿವಾಕರ್ ನಾಯ್ಕ, ರಾಮಲಿಂಗ ಜಾದವ, ಶ್ರೀನಿವಾಸ ಬಾಬ, ರಫೀಕ್ ಖಾನ್, ಉಸ್ಮಾನ್ ಶೇಖ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.