ಹೊನ್ನಾವರ: ನವಿಲಗೋಣ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲಟ್ಟಿಕೇರಿ ಕಾಲುದಾರಿ ನಿರ್ಮಾಣ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ₨ 5 ಲಕ್ಷ ಅನುದಾನದಾನಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ ಹೆಬ್ಬಾರ, ಉಪಾಧ್ಯಕ್ಷ ಮಾದೇವಿ ನಾಯ್ಕ, ಸದಸ್ಯೆ ಬೇಬಿ ಮುಕ್ರಿ, ಪ್ರಮುಖರಾದ ರಮೇಶ ಶೆಟ್ಟಿ, ಎಂ.ಡಿ ನಾಯ್ಕ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.