ADVERTISEMENT

8,170 ಲೀ. ಅಕ್ರಮ ಮದ್ಯ ನಾಶ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2019, 10:23 IST
Last Updated 20 ಫೆಬ್ರುವರಿ 2019, 10:23 IST
ಜಿಲ್ಲೆಯ ವಿವಿಧೆಡೆ ವಶ ಪಡಿಸಿಕೊಳ್ಳಲಾದ ಮದ್ಯವನ್ನು ಅಬಕಾರಿ ಇಲಾಖೆ ಕಚೇರಿ ಆವರಣದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ನಾಶ ಮಾಡಲಾಯಿತು 
ಜಿಲ್ಲೆಯ ವಿವಿಧೆಡೆ ವಶ ಪಡಿಸಿಕೊಳ್ಳಲಾದ ಮದ್ಯವನ್ನು ಅಬಕಾರಿ ಇಲಾಖೆ ಕಚೇರಿ ಆವರಣದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ನಾಶ ಮಾಡಲಾಯಿತು    

ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆಯ ಸಂದರ್ಭ ಜಿಲ್ಲೆಯಲ್ಲಿ ವಶ ಪಡಿಸಿಕೊಳ್ಳಲಾದ ಅಕ್ರಮ ಮದ್ಯವನ್ನು ನಗರದ ಅಬಕಾರಿ ಇಲಾಖೆ ಕಚೇರಿ ಆವರಣದಲ್ಲಿ ಬುಧವಾರ ನಾಶ ಮಾಡಲಾಯಿತು. ಗೋವಾ ಮದ್ಯ, ಬಿಯರ್, ಫೆನ್ನಿ, ಕಳ್ಳಭಟ್ಟಿ ಸಾರಾಯಿ ಅದರಲ್ಲಿ ಸೇರಿದ್ದವು.

ಈ ಬಗ್ಗೆ ಮಾಹಿತಿ ನೀಡಿದ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಎಲ್.ಎ.ಮಂಜುನಾಥ್, ‘ಒಟ್ಟು 8,170 ಲೀಟರ್ ವಿವಿಧ ಮದ್ಯ ಹಾಗೂ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಇವುಗಳ ಅಂದಾಜು ಮೊತ್ತ₹ 23.73 ಲಕ್ಷವಾಗಿದ್ದು,121 ಪ್ರಕರಣಗಳನ್ನು ದಾಖಲಿಸಲಾಗಿತ್ತು’ ಎಂದು ಮಾಹಿತಿ ನೀಡಿದರು.

‘ಬೆಲ್ಲದ ಕೊಳೆ ಅಂಕೋಲಾ ತಾಲ್ಲೂಕಿನಲ್ಲಿ ಹೆಚ್ಚು ಸಿಕ್ಕಿದೆ. ಲೋಕಸಭಾ ಚುನಾವಣೆಯೂ ಸಮೀಪದಲ್ಲೇ ಇರುವ ಕಾರಣ ಇಲಾಖೆಯ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ. ಮದ್ಯದ ಅಕ್ರಮ ಸಾಗಣೆಯ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ. ಅಕ್ರಮದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಮತ್ತಷ್ಟು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯವಿದೆ. ಕಡಿಮೆ ಹಣಕ್ಕೆ ಸಿಗುತ್ತದೆ ಎಂದು ಕಳಪೆ ಮದ್ಯ ಸೇವಿಸಿ ಆರೋಗ್ಯ ಕೆಡಿಸಿಕೊಳ್ಳಬಾರದು’ ಎಂದು ಮನವಿ ಮಾಡಿದರು.

ADVERTISEMENT

ಅಬಕಾರಿ ಇಲಾಖೆ ನಿರೀಕ್ಷಕಿ ಸುವರ್ಣಾ ನಾಯ್ಕ ಹಾಗೂ ಇಲಾಖೆಯ ಸಿಬ್ಬಂದಿ ಇದ್ದರು.

***

ಗೋವಾ ಫೆನ್ನಿ; 2,491ಲೀಟರ್‌

ಬಿಯರ್; 518ಲೀಟರ್‌

ಬೆಲ್ಲದ ಕೊಳೆ; 459ಲೀಟರ್‌

ಕಳ್ಳಭಟ್ಟಿ ಸಾರಾಯಿ; 61ಲೀಟರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.