ಕಾರವಾರ: ಕರಾವಳಿಯಲ್ಲಿ ಮೂರು ದಿನಗಳಿಂದ ತುಸು ಕಡಿಮೆಯಾಗಿದ್ದ ಮಳೆಯು ಸೋಮವಾರದಿಂದ ಮತ್ತೆ ಅಬ್ಬರಿಸುತ್ತಿದೆ. ನಗರದಲ್ಲಿ ಬೆಳಿಗ್ಗೆಯಿಂದ ಜೋರಾಗಿ ಮಳೆಯಾಗುತ್ತಿದೆ.
ಹೊನ್ನಾವರದಲ್ಲಿ ಕೂಡ ವರ್ಷಧಾರೆ ಜೋರಾಗಿದೆ. ಗುಂಡಬಾಳಾ ನದಿ, ಭಾಸ್ಕೇರಿ ಹಳ್ಳದಲ್ಲಿ ನೆರೆ ಬಂದಿದ್ದು ನೂರಾರು ಮನೆಗಳಿಗೆ ನೀರು ನುಗ್ಗಿದೆ. ಅಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಭಟ್ಕಳ, ಜೊಯಿಡಾದಲ್ಲೂ ಮಳೆ ಜೋರಾಗಿ ಸುರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.