ADVERTISEMENT

ಶಿರಸಿ: ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 7:09 IST
Last Updated 19 ಜನವರಿ 2021, 7:09 IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ   

ಶಿರಸಿ: ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡದ, ಮೂಲಸೌಕರ್ಯ ಒದಗಿಸದ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಶಿರಸಿ ನಗರ ಘಟಕದವರು ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮೆರವಣಿಗೆ ಮೂಲಕ ವಿದ್ಯಾರ್ಥಿಗಳು ಉಪವಿಭಾಗಾಧಿಕಾರಿ ಕಚೇರಿವರೆಗೆ ತೆರಳಿದರು. ಮೆರವಣಿಗೆ ಉದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

'ಶಾಲಾ ಕಾಲೇಜುಗಳು ತೆರದು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ, ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿ ಗಮನಿಸಿ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ' ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

'ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾವಕಾಶ ನೀಡಬೇಕು' ಎಂದು ಒತ್ತಾಯಿಸಿದರು.

'ಅತಿಥಿ ಉಪನ್ಯಾಸಕರಿಲ್ಲದೆ ತರಗತಿ ನಡೆಯುತ್ತಿಲ್ಲ. ಮುಂದಿನ ತಿಂಗಳು ಪರೀಕ್ಷೆ ನಡೆಸುವುದಾಗಿ ಕರ್ನಾಟಕ ವಿಶ್ವವಿದ್ಯಾಲಯ ತಿಳಿಸಿದೆ. ಆದರೆ, ಪಠ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲ' ಎಂದು ಆರೋಪಿಸಿದರು.

'ಕೂಡಲೆ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಿಸಲಿ. ಪದವಿ ಪರೀಕ್ಷೆಗಳನ್ನು ಕನಿಷ್ಠ ಮೂರು ತಿಂಗಳು ಮುಂದೂಡಲಿ' ಎಂಬ ಬೇಡಿಕೆ ಇಡಲಾಯಿತು. ಪ್ರಮುಖರಾದ ಗುರುರಾಜ ನಾಯ್ಕ, ಸುಪ್ರಿತಾ, ಅಕ್ಷಯ ನಾಯ್ಕ, ಸೋಮು, ವಿನಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.