ADVERTISEMENT

ಬಸ್- ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 3:52 IST
Last Updated 14 ಜೂನ್ 2019, 3:52 IST
   

ಅಂಕೋಲಾ:ತಾಲ್ಲೂಕಿನ ಹೊಸೂರುಸೇತುವೆಯ ಬಳಿ ಶುಕ್ರವಾರ ನಸುಕಿನಲ್ಲಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ನಲ್ಲಿದ್ದ ನಾಲ್ಕೈದು ಪ್ರಯಾಣಿಕರಿಗೆ ಗಾಯಗಳಾಗಿವೆ.

ಮಂಗಳೂರಿನಿಂದ ಮುಂಬೈಗೆ ಹೋಗುತ್ತಿದ್ದ ಸುಗಮ ಟೂರಿಸ್ಟ್ ಸಂಸ್ಥೆಯ ಬಸ್ ಹಾಗೂ ಮಹಾರಾಷ್ಟ್ರದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಚಾಲಕರು ತಮ್ಮ ವಾಹನಗಳಲ್ಲೇ ಸಿಲುಕಿದ್ದು, ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಮಾಡಿ ಹೊರತೆಗದರು.

ಗಾಯಾಳುಗಳನ್ನು ಕುಮಟಾ ಮತ್ತು ಅಂಕೋಲಾ ತಾಲ್ಲೂಕು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ADVERTISEMENT

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.