
ಪ್ರಜಾವಾಣಿ ವಾರ್ತೆ
ದಾಂಡೇಲಿ: ಸಮೀಪದ ಡೊಮಗೇರಾ ಬಳಿ ಎರಡು ಟ್ರಕ್ ಮುಖಾಮುಖಿ ಡಿಕ್ಕಿಯಾದ ಘಟನೆ ಮಂಗಳವಾರ ನಡೆದಿದೆ.
ಸರಕುಗಳನ್ನು ಹೊತ್ತು ದಾಂಡೇಲಿ ಕಡೆಗೆ ಬರುತ್ತಿದ್ದ ಟ್ರಕ್ ದಾಂಡೇಲಿಯಿಂದ ಹಳಿಯಾಳ ಕಡೆಗೆ ಹೋಗುತ್ತಿದ್ದ ಇನ್ನೊಂದು ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ಸಂಚಾರ ಅಡಚಣೆ ಉಂಟಾಗಿತ್ತು ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.