
ಪ್ರಜಾವಾಣಿ ವಾರ್ತೆ
ಬಂಧನ
(ಪ್ರಾತಿನಿಧಿಕ ಚಿತ್ರ)
ಶಿರಸಿ: ಇಲ್ಲಿನ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಜಾಮೀನು ಪಡೆದು, 13 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ನಿತಿನ ಅಶೋಕ ರಾವ್ ಎಂಬಾತನನ್ನು ಶಿರಸಿ ಪೋಲಿಸರು ಬಂಧಿಸಿದ್ದಾರೆ.
ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಂಗಳೂರು ಮೊದಲಾದೆ ಮಾಹಿತಿ ಕಲೆ ಹಾಕಿದ ಪೊಲೀಸರು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರ ಬಡಾವಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.