ಬಂಧನ (ಸಾಂದರ್ಭಿಕ ಚಿತ್ರ)
ಶಿರಸಿ: ಪ್ರಕರಣವೊಂದರಲ್ಲಿ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಶಿವಮೊಗ್ಗ ಭದ್ರಾಪುರದ ಮೋಹನ ಮಾದು ಶಿಂಧೆಯನ್ನು ಇಲ್ಲಿನ ನಗರ ಠಾಣೆ ಪೊಲೀಸರು ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಾವರದಲ್ಲಿ ವಶಕ್ಕೆ ಪಡೆದು ಕೋರ್ಟ್‍ಗೆ ಹಾಜರುಪಡಿಸಿದ್ದಾರೆ.
ಡಿಎಸ್‍ಪಿ ಗೀತಾ ಪಾಟೀಲ ಮಾರ್ಗದರ್ಶನ, ಸಿಪಿಐ ಶಶಿಕಾಂತ ವರ್ಮಾ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿಎಸ್‍ಐ ನಾಗಪ್ಪ ಬಿ, ಸಿಬ್ಬಂದಿ ವಿಶ್ವನಾಥ ಬಂಡಾರಿ, ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.