ADVERTISEMENT

ಬಾಣಂತಿ ಸಾವು ವಿಚಾರ: ವರದಿ ಬಂದ ಬಳಿಕ ಕ್ರಮ- ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 12:55 IST
Last Updated 9 ಸೆಪ್ಟೆಂಬರ್ 2020, 12:55 IST
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು   

ಕಾರವಾರ: ‘ಜಿಲ್ಲಾ ಆಸ್ಪತ್ರೆಯಲ್ಲಿ ಈಚೆಗೆ ಬಾಣಂತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯಿಂದ ವರದಿ ಕೇಳಲಾಗಿದೆ. ಅದರ ಆಧಾರದಲ್ಲಿ ತಪ್ಪಿತಸ್ಥರು ಕಂಡುಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಈ ಬಗ್ಗೆ ‘ಫೇಸ್‌ಬುಕ್‌’ನ ತಮ್ಮ ಪುಟದಲ್ಲಿ ಅವರು ಬರೆದುಕೊಂಡಿದ್ದಾರೆ.

ಕಾರವಾರದ ಸರ್ವೋದಯ ನಗರದ ಗೀತಾ ಬಾನಾವಳಿ (30) ಎಂಬುವವರು ಜಿಲ್ಲಾ ಆಸ್ಪತ್ರೆಯಲ್ಲಿ ಆ.31ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸೆ.3ರಂದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆಂದು ಅವರನ್ನು ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದರು. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಅವರ ಸಂಬಂಧಿಕರು, ಪರಿಚಯಸ್ಥರು ಪ್ರತಿಭಟನೆ ನಡೆಸಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.