ಯಲ್ಲಾಪುರ: ಹಿಂದುಳಿದ ದನಗರಗೌಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ರಾಜ್ಯ ದನಗರಗೌಳಿ ಯುವ ಸೇನೆ ರಾಜ್ಯ ಅಧ್ಯಕ್ಷ ಸಂತೋಷ ವರಕ್ ಆಗ್ರಹಿಸಿದ್ದಾರೆ.
‘ದನ, ಕರು, ಎಮ್ಮೆಗಳನ್ನೇ ನಂಬಿ ಹೈನುಗಾರಿಕೆಯನ್ನು ವೃತ್ತಿಯನ್ನಾಗಿಸಿಕೊಂಡ ದನಗರಗೌಳಿ ಸಮುದಾಯದವರು ದಟ್ಟವಾದ ಕಾಡಿನಲ್ಲಿ ವಾಸವಾಗಿದ್ದಾರೆ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದಾರೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರು ಈಚೆಗೆ ಕುಣಬಿ ಹಾಗೂ ಹಾಲಕ್ಕಿ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಪ್ರಸ್ತಾಪಿಸಿದ್ದಾರೆ. ಅವರಿಗೆ ದನಗರ ಗೌಳಿ ಸಮುದಾಯದ ಕಷ್ಟ ಕಂಡಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.