ಶಿರಸಿ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಮನೆಮನೆ ಕಸ ಸಂಗ್ರಹಣೆ ಉದ್ದೇಶಕ್ಕೆ ಹೆಚ್ಚುವರಿ ಮೂರು ಕಸ ವಿಲೆವಾರಿ ವಾಹನಗಳಿಗೆ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಈಗಾಗಲೇ 14 ಕಸ ವಿಲೇವಾರಿ ವಾಹನಗಳು ಕೆಲಸ ಮಾಡುತ್ತಿದೆ. ಇದೀಗ ಮತ್ತೆ 3 ವಾಹನಗಳು ಸೇರ್ಪಡೆಗೊಂಡಿದೆ. ನಗರದಲ್ಲಿ ಕಸ ವಿಲೇವಾರಿಗೆ ಸಮಸ್ಯೆ ಆಗದಂತೆ ನಗರಸಭೆ ಕೆಲಸ ಮಾಡುತ್ತಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಗರಾಡಳಿತವು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿದೆ. ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದರು.
ಎಲ್ಲಿಯೂ ಕಳಪೆ ಕಾಮಗಾರಿ ಆಗದಂತೆ ನೋಡಿಕೊಳ್ಳುತ್ತಿದ್ದೇವೆ. ಉಳಿದ ಕಾಮಗಾರಿಗಳನ್ನು ಮಳೆಗಾಲದ ನಂತರ ಮಾಡಲಾಗುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ನಗರಸಭೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕಸದ ಗುಡ್ಡೆಯಲ್ಲಿ ಬೆಂಕಿ ಅನಾಹುತಗಳು ಆಗದಂತೆ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ್ ಭಟ್, ಪ್ರಭಾರಿ ಪೌರಾಯುಕ್ತ ಶಿವರಾಜ, ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.