ADVERTISEMENT

ಶಿರಸಿ: ಆರೋಗ್ಯ ನಿಯಮಿತ ತಪಾಸಣೆಗೆ ಸಲಹೆ

ಹುಲೇಕಲ್ ಗ್ರಾಮ ಪಂಚಾಯಿತಿಯಲ್ಲಿ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 4:24 IST
Last Updated 20 ಜುಲೈ 2025, 4:24 IST
ಶಿರಸಿ ತಾಲ್ಲೂಕಿನ ಹುಲೇಕಲ್ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಡಾ. ಮಮತಾ ಹೆಗಡೆ ಉದ್ಘಾಟಿಸಿದರು
ಶಿರಸಿ ತಾಲ್ಲೂಕಿನ ಹುಲೇಕಲ್ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಡಾ. ಮಮತಾ ಹೆಗಡೆ ಉದ್ಘಾಟಿಸಿದರು   

ಶಿರಸಿ: ‘ಕ್ಯಾನ್ಸರ್ ಕುರಿತ ತಪ್ಪು ಕಲ್ಪನೆಗಳನ್ನು ದೂರವಾಗಿಸಿಕೊಂಡು, ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡರೆ ಆರೋಗ್ಯವಂತ ಜೀವನ ಸಾಗಿಸಬಹುದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚನ್ನಬಸಪ್ಪ ಹಾವಣಗಿ ತಿಳಿಸಿದರು.

ತಾಲ್ಲೂಕಿನ ಹುಲೇಕಲ್ ಗ್ರಾಮ ಪಂಚಾಯಿತಿಯಲ್ಲಿ ಟೆಕ್‌ಟ್ರೋನಿಕ್ಸ್, ಬೆಂಗಳೂರಿನ ಇಂಡಿಯನ್ ಕ್ಯಾನ್ಸರ್ ಸೊಸೈಟಿ  ಬುಧವಾರ ಆಯೋಜಿಸಿದ್ದ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

‘ನಿಯಮಿತ ಆರೋಗ್ಯ ತಪಾಸಣೆ ಇಂದಿನ ಕಾಲಮಾನಕ್ಕೆ ಅವಶ್ಯ. ಕ್ಯಾನ್ಸರ್ ತಪಾಸಣೆ ಮಾಡಿಸಿಕೊಂಡರೆ, ಅವಶ್ಯವಿದ್ದಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು’ ಎಂದರು.

ADVERTISEMENT

ವೈದ್ಯೆ ಮಮತಾ ಹೆಗಡೆ ಅವರು ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಬಾಯಿ ಕ್ಯಾನ್ಸರ್ ಕುರಿತು ಸಮಗ್ರ ಮಾಹಿತಿ ನೀಡಿ, ತಪಾಸಣೆ ಮಹತ್ವದ ಕುರಿತು ತಿಳಿಸಿದರು. 50ಕ್ಕೂ ಹೆಚ್ಚು ಸಾರ್ವಜನಿಕರು ತಪಾಸಣೆಗೆ ಒಳಗಾದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಸಿಂ ಇಬ್ರಾಹಿಂ ಸಾಬ್, ಅಸ್ಮಿತೆ ಫೌಂಡೇಷನ್ ಕಾರ್ಯನಿರ್ವಹಕ ನಿರ್ದೇಶಕ ರಿಯಾಜ್ ಸಾಗರ್ ಮಾತನಾಡಿದರು. ತಾಲ್ಲೂಕು ಎನ್‌ಆರ್‌ಎಲ್‌ಎಂ ಕಿರಣ ಭಟ್,  ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಮನ್ವಯಾಧಿಕಾರಿ ರೋಹಿಣಿ ಸೈಲ್ ಇದ್ದರು.

ಶಿರಸಿಯ ಆಯ್ದ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದ್ದು ಮೊದಲ ಶಿಬಿರ ಹುಲೇಕಲ್‍ನಲ್ಲಿ ನಡೆಸಲಾಗಿದೆ.
ರಿಯಾಜ್ ಸಾಗರ್ ಅಸ್ಮಿತೆ ಫೌಂಡೇಶನ್ ಕಾರ್ಯನಿರ್ವಹಕ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.