ADVERTISEMENT

ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕೃಷಿ ಕಾಯ್ದೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 14:12 IST
Last Updated 6 ಫೆಬ್ರುವರಿ 2021, 14:12 IST
ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘದವರು ಹೊನ್ನಾವರ ತಾಲ್ಲೂಕಿನ ಅಪ್ಸರಕೊಂಡದ ಸಮೀಪ ಹೆದ್ದಾರಿಯಲ್ಲಿ ಶನಿವಾರ ಸಾಂಕೇತಿವಾಗಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು
ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘದವರು ಹೊನ್ನಾವರ ತಾಲ್ಲೂಕಿನ ಅಪ್ಸರಕೊಂಡದ ಸಮೀಪ ಹೆದ್ದಾರಿಯಲ್ಲಿ ಶನಿವಾರ ಸಾಂಕೇತಿವಾಗಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು   

ಹೊನ್ನಾವರ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕೃಷಿ ಕಾಯ್ದೆ ವಿರೋಧಿಸಿ, ಅಖಿಲ ಭಾರತ್ ಕಿಸಾನ್ ಸಭಾ ಕರೆ ನೀಡಿರುವ ಪ್ರತಿಭಟನೆಯನ್ನು ಕರ್ನಾಟಕ ಪ್ರಾಂತ ರೈತ ಸಂಘವು ಬೆಂಬಲಿಸಿದ. ತಾಲ್ಲೂಕಿನ ಅಪ್ಸರಕೊಂಡದ ಸಮೀಪ ಶನಿವಾರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟಿಸಲಾಯಿತು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾರಾಮ ನಾಯಕ ಮಾತನಾಡಿ, 'ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೂರು ಕೃಷಿ ಕಾನೂನು ವಾಪಸ್ ಪಡೆಯಬೇಕು. ರೈತರು ಪ್ರತಿಭಟನೆ ಹಮ್ಮಿಕೊಂಡಿರುವ ಜಾಗದಲ್ಲಿ ಅವರಿಗೆ ಮೂಲ ಸೌಕರ್ಯ ಒದಗಿಸಬೇಕು' ಎಂದು ಆಗ್ರಹಿಸಿದರು.

ವಾಹನ ಸಂಚಾರಕ್ಕೆ ತಡೆಯು ಸಾಂಕೇತಿಕವಾಗಿ ನಡೆಯಿತು. ಸ್ವಲ್ಪ ಹೊತ್ತು ಸಂಚಾರಕ್ಕೆ ಅಡಚಣೆಯಾಯಿತು. ವಿವಿಧ ಸಂಘಟನೆಗಳ ಮುಖಂಡರಾದ ಚಂದ್ರಕಾಂತ ಕೊಚರೇಕರ, ತಿಲಕ ಗೌಡ, ಮಂಜುನಾಥ ಗೌಡ, ತಿಮ್ಮಪ್ಪ ಗೌಡ ಮಾತನಾಡಿದರು.

ADVERTISEMENT

ಮುಖಂಡರಾದ ಗಣೇಶ ಭಂಡಾರಿ, ಅಣ್ಣಪ್ಪ ಗೌಡ, ಮಂಜುನಾಥ ಗೌಡ, ಅಣ್ಣಪ್ಪ ನಾಯ್ಕ, ಅಜೀತ್ ತಾಂಡೇಲ, ದೇವಿ ಗೌಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.