ADVERTISEMENT

ಹೊನ್ನಾವರ|ಮದ್ಯವರ್ಜನ ಶಿಬಿರ: 58 ಮಂದಿ ಭಾಗಿ

​ಪ್ರಜಾವಾಣಿ ವಾರ್ತೆ
Published 15 ಮೇ 2025, 12:56 IST
Last Updated 15 ಮೇ 2025, 12:56 IST
ಹೊನ್ನಾವರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಈಚೆಗೆ ನಡೆದ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಪಿಐ ಸಿದ್ದರಾಮೇಶ್ವರ ಮಾತನಾಡಿದರು
ಹೊನ್ನಾವರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಈಚೆಗೆ ನಡೆದ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಪಿಐ ಸಿದ್ದರಾಮೇಶ್ವರ ಮಾತನಾಡಿದರು   

ಹೊನ್ನಾವರ: ಇಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ ಆಯೋಜಿಸಿದ್ದ ಮದ್ಯವರ್ಜನ ಶಿಬಿರದಲ್ಲಿ 58 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.

ಏಳು ದಿನ ನಡೆದ ಶಿಬಿರದಲ್ಲಿ ಯೋಗಾಭ್ಯಾಸ, ತಜ್ಞರಿಂದ ಉಪನ್ಯಾಸ ಮೊದಲಾದ ಕಾರ್ಯಕ್ರಮಗಳು ನಡೆದವು.

ಎಂಪಿಇ ಸೊಸೈಟಿಯ ಕೇಂದ್ರೀಯ ವಿದ್ಯಾಲಯದಲ್ಲಿ ಈಚೆಗೆ ನಡೆದ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಪಿಐ ಸಿದ್ದರಾಮೇಶ್ವರ, ‘ಮದ್ಯ ವ್ಯಸನ ವ್ಯಕ್ತಿಯ ಆರೋಗ್ಯ ಹಾಳು ಮಾಡುತ್ತದೆ. ಸಾಮಾಜಿಕವಾಗಿಯೂ ಕಳಂಕ ತರುತ್ತದೆ’ ಎಂದು ಹೇಳಿದರು.

ADVERTISEMENT

ಎಂಪಿಇ ಸೊಸೈಟಿಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ, ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಭಟ್ಟ, ತಾಲ್ಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ರಾಜೇಶ ಕಿಣಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ನಿರ್ದೇಶಕ ಮಹೇಶ ಎಂ.ಡಿ., ನಿವೃತ್ತ ಪ್ರಾಚಾರ್ಯ ಎಸ್.ಜಿ. ಭಟ್ಟ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.