ADVERTISEMENT

ಅಂಬೇಡ್ಕರ್ ಭಾರತೀಯರಿಗೆ ಪ್ರೇರಣೆ: ಶಾಸಕ ಹೆಬ್ಬಾರ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2025, 12:43 IST
Last Updated 14 ಏಪ್ರಿಲ್ 2025, 12:43 IST
ಯಲ್ಲಾಪುರದಲ್ಲಿ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಶಾಸಕ ಶಿವರಾಮ ಹೆಬ್ಬಾರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು
ಯಲ್ಲಾಪುರದಲ್ಲಿ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಶಾಸಕ ಶಿವರಾಮ ಹೆಬ್ಬಾರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು   

ಯಲ್ಲಾಪುರ: ‘ಅಂಬೇಡ್ಕರ್ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಮಹನೀಯರು. ಅವರು ಪ್ರತಿಯೊಬ್ಬ ಭಾರತೀಯನಿಗೆ ಪ್ರೇರಣೆಯಾಗಿದ್ದಾರೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ಗಾಂಧಿ ಕುಟೀರದಲ್ಲಿ ತಾಲ್ಲೂಕು ಆಡಳಿತ ಸೋಮವಾರ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್‌ ರಾಂ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವದರ್ಶನ ಪಿಯು ಕಾಲೇಜಿನ ಪ್ರಾಚಾರ್ಯ ದತ್ತಾತ್ರಯ ಗಾಂವ್ಕರ ಹಾಗೂ ಶಿಕ್ಷಕ ನವೀನಕುಮಾರ್ ಉಪನ್ಯಾಸ ನೀಡಿದರು.

ADVERTISEMENT

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್ ಯಲ್ಲಪ್ಪ ಗೊಣೆಣ್ಣವರ, ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಅಮಿತ್ ಅಂಗಡಿ, ತಾಲ್ಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ್, ಬಿಇಒ ಎನ್.ಆರ್. ಹೆಗಡೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಚಂದ್ರ ಗೋಳಾ, ಪ್ರಮುಖರಾದ ಪಕೀರಪ್ಪ ಭೋವಿವಡ್ಡರ್, ಶಾಮಲಿ ಪಾಟಣ್ಕರ್, ಎನ್.ಕೆ. ಭಟ್ ಮೆಣಸೂಪಾಲ್ ಇದ್ದರು.

ಜೆ.ಬಿ. ನರೊಟ್ಟಿ ಸ್ವಾಗತಿಸಿದರು. ಶಿಕ್ಷಕ ಚಂದ್ರಹಾಸ ನಾಯ್ಕ ನಿರೂಪಿಸಿದರು. ಪಟ್ಟಣದ ಗಾಂಧಿ ಕುಟೀರದಿಂದ ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಅವರ ಚಿತ್ರ ಮೆರವಣಿಗೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.