ADVERTISEMENT

ಖಾಸಗಿ ಆಂಬುಲೆನ್ಸ್ ಸೇವಾ ದರ ನಿಗದಿಗೆ ಕಾನೂನು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 17:46 IST
Last Updated 30 ಜುಲೈ 2025, 17:46 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಕಾರವಾರ: ‘ಖಾಸಗಿ ಆಂಬುಲೆನ್ಸ್‌ಗಳ ಸೇವೆಯನ್ನು ಮೊಬೈಲ್ ಆ್ಯಪ್ ಮೂಲಕ ಪಡೆಯಲು ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ (ಕೆಪಿಎಂಇ) ಕಾಯ್ದೆಯಂತೆ ಅವುಗಳ ಸೇವೆಗೆ ನಿರ್ದಿಷ್ಟ ದರ ನಿಗದಿಪಡಿಸಲು ಕಾಯ್ದೆ ರೂಪಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲ್ಲಿ ಹೇಳಿದರು.

‘ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸಲಾಗುವುದು. ‘ಖಾಸಗಿ ಆಂಬುಲೆನ್ಸ್‌ಗಳು ಅಧಿಕ ದರ ವಿಧಿಸದಂತೆ ನಿಯಂತ್ರಿಸಲಾಗುವುದು. ಆಂಬುಲೆನ್ಸ್, ಸಂಚಾರಿ ಆರೋಗ್ಯ ಘಟಕಗಳು ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗುವುದು’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT