ADVERTISEMENT

ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರ ಸಂಘ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 6:57 IST
Last Updated 30 ಜನವರಿ 2026, 6:57 IST
ಸಿದ್ದಾಪುರ ತಾಲ್ಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಅವಿರೋಧವಾಗಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಅನಂತ ಹೆಗಡೆ ಗೊಂಟನಾಳ  ಹಾಗೂ ನರೇಂದ್ರ ಹೆಗಡೆ ಹೊಂಡಗಾಶಿ ಆಯ್ಕೆಯಾದರು
ಸಿದ್ದಾಪುರ ತಾಲ್ಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಅವಿರೋಧವಾಗಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಅನಂತ ಹೆಗಡೆ ಗೊಂಟನಾಳ  ಹಾಗೂ ನರೇಂದ್ರ ಹೆಗಡೆ ಹೊಂಡಗಾಶಿ ಆಯ್ಕೆಯಾದರು   

ಸಿದ್ದಾಪುರ: ತಾಲ್ಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಅನಂತ ಹೆಗಡೆ ಗೊಂಟನಾಳ ಹಾಗೂ ಉಪಾಧ್ಯಕ್ಷರಾಗಿ ನರೇಂದ್ರ ಹೆಗಡೆ ಹೊಂಡಗಾಶಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಾರ್ಯಾಲಯದಲ್ಲಿ ಗುರುವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನಿರ್ದೇಶಕರಾದ ಅನಂತ ಹೆಗಡೆ ಹೊಸಗದ್ದೆ, ನಾಗರಾಜ ಹೆಗಡೆ ಹುಲಿಮನೆ, ವಿಘ್ನೇಶ್ವರ ಗೌಡ ಮಾದಲಮನೆ, ಮಂಜುನಾಥ ನಾಯ್ಕ ತೆಂಗಿನಮನೆ, ಮಹಾಬಲೇಶ್ವರ ಭಟ್ಟ ಗಾಳಿಮನೆ, ಶಶಿಧರ ಪಾಟೀಲ್ ಹಾರ್ಸಿಕಟ್ಟಾ, ಗೀತಾ ಹೆಗಡೆ ಎಡೆಮನೆ, ಬಂಗಾರಿ ನಾಯ್ಕ ಕಬ್ಬಿಸರ, ಮಹಾಲಕ್ಷ್ಮೀ ಹಸ್ಲರ್ ಶಾನಬಾಳೆಗದ್ದೆ ಉಪಸ್ಥಿತರಿದ್ದರು.

ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಪಿ.ಶಾಸ್ತ್ರಿ ಅವರು ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಹಾಗೂ ಎಲ್ಲ ನಿರ್ದೇಶಕರನ್ನು ಅಭಿನಂದಿಸಿದರು.

ADVERTISEMENT

ರಿಟರ್ನಿಂಗ್ ಅಧಿಕಾರಿಯಾಗಿ ಸುನೀಲ್ ತೇಲಕರ ಕಾರ್ಯನಿರ್ವಹಿಸಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ ಹೆಗಡೆ ಚಳ್ಳೆಹದ್ದ ಹಾಗೂ ಸಿಬ್ಬಂದಿ ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.