ADVERTISEMENT

ಅಂಕೋಲಾ: ವಿದ್ಯುತ್ ಕಂಬಕ್ಕೆ ಡಿಕ್ಕಿ- ಬೆಂಕಿ ಹೊತ್ತಿಕೊಂಡು ಭಸ್ಮವಾದ ಕಾರು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 5:37 IST
Last Updated 25 ಆಗಸ್ಟ್ 2021, 5:37 IST
ಸುಟ್ಟುಹೋಗಿರುವ ಕಾರು
ಸುಟ್ಟುಹೋಗಿರುವ ಕಾರು   

ಅಂಕೋಲಾ: ತಾಲ್ಲೂಕಿನ ಹೆಬ್ಬುಳ ಬಳಿ ಬುಧವಾರ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟುಹೋಗಿದೆ.

ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಕುಮಟಾ ಕಡೆಗೆ ಪ್ರಯಾಣಿಸುತ್ತಿತ್ತು. ಕಾರು ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ತಾಳವಟ್ಟಿಯ ಬಿ.ಆರ್.ಹರಿ ಅವರಿಗೆ ಸೇರಿದೆ.

ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಂಕೋಲಾ ಅಗ್ನಿಶಾಮಕ ಠಾಣೆಯ ಅಧಿಕಾರಿ ಉಮೇಶ್ ನಾಯ್ಕ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ಆರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.