ಅಂಕೋಲಾ: ತಾಲ್ಲೂಕಿನ ಬೆಲೇಕೇರಿ ಬಂದರಿನಲ್ಲಿ ಲಂಗರು ಹಾಕಿದ್ದ ಯಾಂತ್ರಿಕ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಮುಳುಗಿದ ಘಟನೆ ನಡೆದಿದೆ.
ಸರಸ್ವತಿ ಅಶೋಕ ಬಾನಾವಳಿಕರ್ ಅವರಿಗೆ ಸೇರಿದ ಶ್ರೀ ಶಾರದಾಂಬಾ ಹೆಸರಿನ ಮೀನುಗಾರಿಕಾ ದೋಣಿ ಮುಳುಗಡೆಯಾಗಿದ್ದು, ದೋಣಿಯಲ್ಲಿ ಯಂತ್ರೋಪಕರಣಗಳು, ಮೀನುಗಾರಿಕೆ ಬಲೆಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಪರಿಕರಗಳು ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಕರಾವಳಿ ಕಾವಲು ಪಡೆ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಂದರಿನಲ್ಲಿ ಸೂಕ್ತ ಬ್ರೇಕ್ ವಾಟರ್ ಇಲ್ಲದ ಕಾರಣ ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಹಲವು ಬಾರಿ ಸಮಸ್ಯೆ ಕುರಿತು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ದೊಡ್ಡ ಗಾತ್ರದ ಅಲೆಗಳಿಂದ ಬಂದರಿನಲ್ಲಿ ಲಂಗರು ಹಾಕಿದ ಸಂದರ್ಭದಲ್ಲಿ ಬೊಟ್‌ಗಳಿಗೆ ಹಾನಿಯಾಗುತ್ತಿರುವುದರಿಂದ ಶಾಶ್ವತವಾಗಿ ಬ್ರೇಕ್ ವಾಟರ್ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.