ADVERTISEMENT

ಅಂಕೋಲಾ: ಬಂದರು ಯೋಜನೆ ಜಾರಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 4:59 IST
Last Updated 21 ನವೆಂಬರ್ 2025, 4:59 IST
ಅಂಕೋಲಾ ಪಟ್ಟಣದಲ್ಲಿ ಕೇಣಿ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳದಲ್ಲಿ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯಕ ಅವರು ಹೋರಾಟಗಾರರೊಂದಿಗೆ ಚರ್ಚಿಸಿದರು 
ಅಂಕೋಲಾ ಪಟ್ಟಣದಲ್ಲಿ ಕೇಣಿ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳದಲ್ಲಿ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯಕ ಅವರು ಹೋರಾಟಗಾರರೊಂದಿಗೆ ಚರ್ಚಿಸಿದರು    

ಅಂಕೋಲಾ: ‘ರೈತರು ಮತ್ತು ಮೀನುಗಾರರ ಜೀವನಕ್ಕೆ ವಿನಾಶಕಾರಿಯಾದ ಯೋಜನೆ ಜಾರಿಗೆ ರೈತ ಸಂಘ ಬಿಡುವುದಿಲ್ಲ’ ಎಂದು ರೈತ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಅಧ್ಯಕ್ಷ ದಿನೇಶ ಶಿರವಾಳ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎದುರು ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.

‘ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಲಿದ್ದು, ಕೇಣಿ ವಾಣಿಜ್ಯ ಬಂದರು ವಿರೋಧದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ನಡೆಯುವ ಸಭೆಯಲ್ಲಿ ಗಮನಕ್ಕೆ ತರುತ್ತೇವೆ. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಧರಣಿ ನಿರತರ ಜೊತೆ ಮಾತುಕತೆ ನಡೆಸದಿದ್ದರೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದರು.

ADVERTISEMENT

ರೈತ ಸಂಘದ ಉಪಾಧ್ಯಕ್ಷ ರಮೇಶ ಕೆಳದಿ, ಮೀನುಗಾರರ ಮುಖಂಡ ಗಣಪತಿ ಮಾಂಗ್ರೆ ಮಾತನಾಡಿದರು. ರೈತ ಸಂಘದ ಸಂಚಾಲಕ ಶಿವು ಮೈಲಾರಿಕೊಪ್ಪ, ಭಾವಿಕೇರಿ ಗ್ರಾಮ ಪಂಚಾಯಿತಿ ಸದಸ್ಯ ಉದಯ ನಾಯಕ, ಬಂದರು ನಿರ್ಮಾಣ ಯೋಜನೆ ವಿರೋಧಿ ಸಮಿತಿಯ ಕಾರ್ಯಾದರ್ಶಿ ಸಂಜೀವ ಬಲೆಗಾರ ಇದ್ದರು.

ಅಂಕೋಲಾ ಪಟ್ಟಣದಲ್ಲಿ ಕೇಣಿ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಸ್ಥಳಕ್ಕೆ ಶಿವಮೊಗ್ಗ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ ಶಿರವಾಳ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.