
ಅಂಕೋಲಾ: ತಾಲ್ಲೂಕಿನ ಕೇಣಿಯಲ್ಲಿ ಅಡುಗೆ ಸಿಲಿಂಡರ್ ದುರಸ್ತಿಗೊಳಿಸುತ್ತಿರುವ ಸಂದರ್ಭದಲ್ಲಿ ಸಿಲಿಂಡರ್ ಸ್ಪೋಟಗೊಂಡು ಆರು ಮಂದಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.
ಕೇಣಿಯ ಗಾಂವ್ಕರವಾಡದ ನಿವಾಸಿ ಗೌರೀಶ ನಾಯಕ ಎನ್ನುವವರ ಮನೆಯಲ್ಲಿ ಬಾಡಿಗೆಯಿದ್ದ ಸುದರ್ಶನ ನಾಯ್ಕ ಎನ್ನುವವರು ಅಡುಗೆ ಅನಿಲ ತುಂಬಿದ್ದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ದುರಸ್ತಿಗೊಳಿಸಲು ಅನಿಲ ಸರಬರಾಜು ಕಂಪನಿಯ ಸಿಬ್ಬಂದಿ ಶ್ರವಣ ಬಂಟ್ ಅವರನ್ನು ಕರೆಸಿದ್ದರು. ದುರಸ್ತಿಗೊಳಿಸುತ್ತಿರುವ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡ ಪರಿಣಾಮ ಬಾಡಿಗೆ ಮನೆಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕೃಷ್ಣ ನಾಯಕ, ಬಾಡಿಗೆದಾರ ಸುದರ್ಶನ ನಾಯ್ಕ ಹಾಗೂ ಸಿಲೆಂಡರ್ ರಿಪೇರಿ ಮಾಡುತ್ತಿದ್ದ ಶ್ರವಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿದ್ದ ನಾಲ್ವರಿಗೂ ಸಹ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಅಂಕೋಲಾ ಠಾಣೆಯ ಪೋಲಿಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.