
ಅಂಕೋಲಾ: ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಶಿಸ್ತುಬದ್ಧವಾಗಿ ವಿದ್ಯಾರ್ಥಿಗಳಿಗೆ ಬೋಧಿಸಿದರೆ, ಅವರು ದೈಹಿಕ ಮತ್ತು ಮಾನಸಿಕವಾಗಿ ಸಬಲರಾಗಿ ಬೆಳೆಯುತ್ತಾರೆ ಎಂದು ಕೆನರಾ ವೆಲ್ಫೇರ್ ಟ್ರಸ್ಟಿನ ಆಡಳಿತಾಧಿಕಾರಿ ರವೀಂದ್ರ ಕೇಣಿ ಹೇಳಿದರು.
ಪಟ್ಟಣದ ಪಿ.ಎಂ.ಹೈಸ್ಕೂಲಿನ ರೈತಭವನದಲ್ಲಿ ಸೋಮವಾರ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ಕೆನರಾ ವೆಲ್ಫೇರ್ ಟ್ರಸ್ಟಿನ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಅಶ್ವಿನ್, ಡಾ.ಬಿ.ಆರ್.ತೋಳೆ, ರಾಜು ನಾಯ್ಕ, ಮುಖ್ಯ ಶಿಕ್ಷಕ ಚಂದ್ರಶೇಖರ್ ಕಡೇಮನಿ, ಎನ್.ಸಿ.ಸಿ. ಕಮಾಂಡರ್ ಜಿ.ಆರ್.ತಾಂಡೇಲ, ರಾಜೇಶ ನಾಯಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.