ADVERTISEMENT

ಮಂಜುಗುಣಿ: ಆಡಳಿತಾಧಿಕಾರಿ ನೇಮಕ ಆದೇಶ ರದ್ದು

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 12:32 IST
Last Updated 15 ಜನವರಿ 2022, 12:32 IST

ಶಿರಸಿ: ತಾಲ್ಲೂಕಿನ ಮಂಜುಗುಣಿಯ ವೆಂಕಟರಮಣ ದೇವಸ್ಥಾನದ ದೈನಂದಿನ ಆಡಳಿತ ನಿರ್ವಹಣೆಗೆ ಆಡಳಿತಾಧಿಕಾರಿ ನೇಮಿಸಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಡಿ.13ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನ ಧಾರವಾಡ ವಿಭಾಗೀಯ ಪೀಠ ಶುಕ್ರವಾರ ರದ್ದುಗೊಳಿಸಿದೆ.

ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಆದೇಶ ರದ್ದುಪಡಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.

ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ ಅವರಿದ್ದ ಏಕಸದಸ್ಯ ಪೀಠ ದೇವಸ್ಥಾನದ ಅರ್ಜಿ ಪುರಸ್ಕರಿಸಿ, ವಿಚಾರಣೆ ನಡೆಸಿ ಆದೇಶ ರದ್ದುಪಡಿಸಿತು. ದೇವಸ್ಥಾನದ ಪರ ವಕೀಲ ಅರುಣಾಚಲ ಹೆಗಡೆ ವಾದ ಮಂಡಿಸಿದ್ದರು.

ADVERTISEMENT

ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಆದೇಶ ಅನುಸರಿಸಿ ಶಿರಸಿ ಉಪವಿಭಾಗಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.