ADVERTISEMENT

ಬ್ಯಾಂಕ್‌ ಸಿಬ್ಬಂದಿ ಕರ್ನಾಟಕದವರೇ ಇರಲಿ: ಮಾಧವ ನಾಯಕ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 15:57 IST
Last Updated 15 ಸೆಪ್ಟೆಂಬರ್ 2022, 15:57 IST
ರಾಜ್ಯದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಕರ್ನಾಟಕದ ಸಿಬ್ಬಂದಿಯನ್ನೇ ನೇಮಕ ಮಾಡುವಂತೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಕಾರವಾರದಲ್ಲಿ ಗುರುವಾರ ಮನವಿ ಸಲ್ಲಿಸಿದರು
ರಾಜ್ಯದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಕರ್ನಾಟಕದ ಸಿಬ್ಬಂದಿಯನ್ನೇ ನೇಮಕ ಮಾಡುವಂತೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಕಾರವಾರದಲ್ಲಿ ಗುರುವಾರ ಮನವಿ ಸಲ್ಲಿಸಿದರು   

ಕಾರವಾರ: ‘ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹೊರರಾಜ್ಯಗಳ ಸಿಬ್ಬಂದಿ ಹೆಚ್ಚಿದ್ದಾರೆ. ಇದರಿಂದ ಜಿಲ್ಲೆಯ ಸಾರ್ವಜನಿಕರಿಗೆ ಭಾಷಾ ತೊಡಕು ಉಂಟಾಗುತ್ತಿದ್ದು, ಬ್ಯಾಂಕ್‌ಗಳಲ್ಲಿ ವ್ಯವಹರಿಸಲು ಪರದಾಡುವಂತಾಗಿದೆ. ಆದ್ದರಿಂದ ಕರ್ನಾಟಕದ ಸಿಬ್ಬಂದಿಯನ್ನೇ ನೇಮಕ ಮಾಡಬೇಕು’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮೂಲಕ ಮುಖ್ಯಮಂತ್ರಿಗೆ ಗುರುವಾರ ಅವರು ಮನವಿ ಸಲ್ಲಿಸಿದರು.

‘ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ ಆಂಧ್ರಪ್ರದೇಶದ ವ್ಯಕ್ತಿಯು, ಬ್ಯಾಂಕ್‌ನ ಖಾತೆಯಿಂದ ₹ 2.69 ಕೋಟಿಯನ್ನು ತನ್ನ ಹೆಂಡತಿಯ ಖಾತೆಗೆ ವರ್ಗಾಯಿಸಿ ಲೂಟಿ ಮಾಡಿದ್ದಾನೆ. ಇನ್ನೂ ದೊಡ್ಡ ವಂಚನೆಯು ಜನರ ಅರಿವಿಗೆ ಬಾರದೇ ಹೊರ ರಾಜ್ಯದ ಸಿಬ್ಬಂದಿಯಿಂದ ನಡೆಯಬಾರದು’ ಎಂದು ಅವರು ಹೇಳಿದರು.

ADVERTISEMENT

ಮುರ್ಡೇಶ್ವರ ರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಸತೀಶ ನಾಯ್ಕ, ಉಪಾಧ್ಯಕ್ಷ ಶ್ರೀಧರ ನಾಯ್ಕ, ಕಾರ್ಯದರ್ಶಿ ಜಗದೀಶ ನಾಯ್ಕ, ಗೋವಿಂದ ನಾಯ್ಕ, ವಸಂತ ನಾಯ್ಕ ಬಳಸೆ, ಶ್ರೀಧರ ನಾಯ್ಕ, ಅಣ್ಣಪ್ಪ ನಾಯ್ಕ, ಈಶ್ವರ ನಾಯ್ಕ, ಸುರೇಶ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.