ಆಪರೇಷನ್ ಸಿಂಧೂರ
ದಾಂಡೇಲಿ: ‘ಆಪರೇಷನ್ ಸಿಂಧೂರ್’ ಹೆಸರಿನಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು, ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿರುವ ಭಾರತೀಯ ಸೇನೆಯ ಕ್ರಮ ಸ್ವಾಗತಾರ್ಹ’ ಎಂದಿ ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಡಿ. ಸ್ಯಾಸನ್ಸ್ ತಿಳಿಸಿದ್ದಾರೆ .
‘ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರನ್ನು ಕ್ರೂರವಾಗಿ ಹತ್ಯೆ ಮಾಡಿದ್ದು ಖಂಡನೀಯ. ಪ್ರತಿಯೊಂದು ರಾಜಕೀಯ ಪಕ್ಷವು ಕೇಂದ್ರ ಸರ್ಕಾರದ ಕ್ರಮಕ್ಕೆ ಬೆಂಬಲವನ್ನು ನೀಡಿವೆ. ಇದು ಭಯೋತ್ಪಾದನೆಯ ವಿರುದ್ಧ ದೇಶದ ಒಗ್ಗಟ್ಟನ್ನು ಪ್ರತಿಬಿಂಬಿಸುತ್ತದೆ. ಉಗ್ರರ ನೆಲೆಗಳ ಮೇಲೆ ದಾಳಿ ಭಾರತೀಯ ಸಶಸ್ತ್ರ ಪಡೆಗಳ ಧೈರ್ಯ ಮತ್ತು ದಕ್ಷತೆಗೆ ಸಾಕ್ಷಿಯಾಗಿದೆ. ಧಾರ್ಮಿಕ ಭಯೋತ್ಪಾದನೆ, ಕೋಮುವಾದ ಮತ್ತು ರಾಷ್ಟ್ರ ಅಸ್ಥಿರಗೊಳಿಸಲು ಪ್ರಯತ್ನಿಸುವ ವಿಭಜಕ ಶಕ್ತಿಗಳನ್ನು ಡಿವೈಎಫ್‌ಐ ವಿರೋಧಿಸುತ್ತದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
‘ಪಹಲ್ಗಾಮ್ ದಾಳಿಯ ಹಿಂದಿನ ನಿಜವಾದ ಅಪರಾಧಿಗಳು ಮತ್ತು ಮಾಸ್ಟರ್ ಮೈಂಡ್‌ಗಳನ್ನು ಗುರುತಿಸಿ ಮಟ್ಟಹಾಕಬೇಕಿದೆ. ಹತ್ಯಾಕಾಂಡಕ್ಕೆ ಕಾರಣರಾದವರನ್ನು ಹಸ್ತಾಂತರಿಸಲು ಮತ್ತು ಭಯೋತ್ಪಾದನಾ ತರಬೇತಿ ಶಿಬಿರಗಳನ್ನು ನಡೆಸಿದಂತೆ ಪಾಕಿಸ್ತಾನದ ಮೇಲೆ ಒತ್ತಡ ಹಾಕಬೇಕಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.