ADVERTISEMENT

ನೌಕರರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ

ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ವಿ. ಸಂಕನೂರ: ವಿವಿಧೆಡೆ ಪ್ರಚಾರ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 3:20 IST
Last Updated 23 ಅಕ್ಟೋಬರ್ 2020, 3:20 IST
ಪಶ್ಚಿಮ ಪದವಿಧರರ ಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿ ಎಸ್ ವಿ ಸಂಕನೂರ ಹಳಿಯಾಳದಲ್ಲಿ ಚುನಾವಣೆ ಪ್ರಚಾರ ನಡೆಸಿ ಮಾತನಾಡಿದರು. ಮಾಜಿ ಶಾಸಕ ಸುನೀಲ ಹೆಗಡೆ ಇದ್ದಾರೆ..
ಪಶ್ಚಿಮ ಪದವಿಧರರ ಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿ ಎಸ್ ವಿ ಸಂಕನೂರ ಹಳಿಯಾಳದಲ್ಲಿ ಚುನಾವಣೆ ಪ್ರಚಾರ ನಡೆಸಿ ಮಾತನಾಡಿದರು. ಮಾಜಿ ಶಾಸಕ ಸುನೀಲ ಹೆಗಡೆ ಇದ್ದಾರೆ..   

ಹಳಿಯಾಳ: ‘ಶಿಕ್ಷಕರ ಕ್ಷೇತ್ರಕ್ಕೆ ಮಾತ್ರ ಮೀಸಲಾಗಿರದೇ ರಾಜ್ಯದ ಎಲ್ಲ 36 ಇಲಾಖೆಯ ನೌಕರರ ಸಮಸ್ಯೆಗಳಿಗೆ ಹಾಗೂ ಪದವೀಧರರ ಸಮಸ್ಯೆಗಳ ಬಗೆ ಹರಿಸುವಲ್ಲಿ ಪ್ರಯತ್ನಿಸಿದ್ದೇನೆ’ ಎಂದು ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ವಿ. ಸಂಕನೂರ ಹೇಳಿದರು.

ಗುರುವಾರ ಇಲ್ಲಿನ ಹಳಿಯಾಳ ವಕೀಲರ ಸಭಾ ಭವನದಲ್ಲಿ ಮತ ಯಾಚಿಸಿ ಮಾತನಾಡಿದರು. ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಎನ್‌ಪಿಎಸ್ ಪಿಂಚಣಿ ಯೋಜನೆ ಬದಲಾಗಿ ಒಪಿಎಸ್ ಯೋಜನೆಯನ್ನು ಪುನಃ ಜಾರಿಗೆ ತರುವುದು, ವಕೀಲರ ಸಂಘವನ್ನು ಅಭಿವೃದ್ಧಿ ಪಡಿಸುವುದು, ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಏರ್ಪಡಿಸುವುದು, ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗೆ ಪರಿಹಾರ ಮತ್ತಿತರ ಹಲವಾರು ಅಭಿವೃದ್ಧಿ ಪರ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ ಎಂದರು.

ಮಾಜಿ ಶಾಸಕ ಸುನೀಲ ಹೆಗಡೆ.ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಣಪತಿ ಕರಂಜೇಕರ, ಮುಖಂಡ ಮಂಗೇಶ ದೇಶಪಾಂಡೆ ಉಪಸ್ಥಿತರಿದ್ದರು.

ADVERTISEMENT

‘ಸಮಸ್ಯೆಗೆ ಸ್ಪಂದನೆ’

ನರಗುಂದ: ‘ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ ಎಸ್.ವಿ.ಸಂಕನೂರ ಅವರು ಪದವೀಧರರ, ಶಿಕ್ಷಕರ, ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಉಳಿದ ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಮತ್ತೊಮ್ಮೆ ಅವರಿಗೆ ಮತ ನೀಡಿ, ಗೆಲ್ಲಿಸಿ’ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಪಟ್ಟಣದ ವೆಂಕಟೇಶ್ವರ ದೇವ ಸ್ಥಾನದ ಆವರಣದಲ್ಲಿ ಗುರುವಾರ ನಡೆದ ಪಶ್ಚಿಮ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ‘ಈಗಾಗಲೇ ಪಕ್ಷದ ಮೂಲಕ 15-20 ಮತದಾರರ ಗುಂಪಿಗೆ ಒಬ್ಬರಂತೆ ಕಾರ್ಯಕರ್ತರನ್ನು ಘಟನಾಯಕರೆಂದು ನೇಮಕ ಮಾಡಲಾಗಿದೆ’ ಎಂದರು.

ಉಪನ್ಯಾಸಕ ಎಂ.ಎಸ್.ಯಾವ ಗಲ್ ಮಾತನಾಡಿದರು. ಮುಖ್ಯ ಶಿಕ್ಷಕ ಕೆ.ಬಿ.ಅರಕೇರಿ , ಜಿ.ಪಂ.ಸದಸ್ಯೆ ರೇಣುಕಾ ಅವರಾದಿ, ಮಂಡಳ ಅಧ್ಯಕ್ಷ ಜಿ.ಎಸ್.ಆದೆಪ್ಪನವರ ಇದ್ದರು. ಪ್ರಾಚಾರ್ಯ ಎಸ್.ಜಿ.ಜಕ್ಕಲಿ ಸ್ವಾಗತಿಸಿದರು. ಅರವಿಂದ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.