ADVERTISEMENT

ಶಿರಸಿ: 75 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 16:30 IST
Last Updated 13 ಆಗಸ್ಟ್ 2022, 16:30 IST
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಶಿರಸಿಯಲ್ಲಿ ರೆಡ್ ಆ‍್ಯಂಟ್ ಸಂಘಟನೆ ವತಿಯಿಂದ ಆಯೋಜಿಸಲಾಗಿದ್ದ 75 ಮೀ. ಉದ್ದದ ರಾಷ್ಟ್ರಧ್ವಜದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಧ್ವಜ ಹೊತ್ತು ಸಾಗಿದರು
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಶಿರಸಿಯಲ್ಲಿ ರೆಡ್ ಆ‍್ಯಂಟ್ ಸಂಘಟನೆ ವತಿಯಿಂದ ಆಯೋಜಿಸಲಾಗಿದ್ದ 75 ಮೀ. ಉದ್ದದ ರಾಷ್ಟ್ರಧ್ವಜದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಧ್ವಜ ಹೊತ್ತು ಸಾಗಿದರು   

ಶಿರಸಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಕರೆ ನೀಡಿರುವ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಅಂಗವಾಗಿ ನಗರದಲ್ಲಿ ಶನಿವಾರ ರೆಡ್ ಆ‍್ಯಂಟ್ ಸಂಘಟನೆ ವತಿಯಿಂದ 75 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ ನಡೆಸಲಾಯಿತು.

ಇಲ್ಲಿನ ಸೆಂಟ್ ಆಂತೋನಿ ಶಾಲೆ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಶಾಲೆಯ ವಿದ್ಯಾರ್ಥಿಗಳು, ಸಂಘಟನೆಯ ಸದಸ್ಯರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು. ನಗರದ ಮುಖ್ಯ ರಸ್ತೆಗಳ ಮೂಲಕ ಉದ್ದನೆಯ ಧ್ವಜವನ್ನು ಮೆರವಣಿಗೆ ಮೂಲಕ ಕೊಂಡೊಯ್ಯುವುದನ್ನು ಜನರು ಕುತೂಹಲದಿಂದ ವೀಕ್ಷಿಸಿದರು.

ತಾಲ್ಲೂಕಿನೆಲ್ಲೆಡೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸದಲ್ಲಿ ಅವರ ತಾಯಿ ಸರ್ವೇಶ್ವರಿ ಹೆಗಡೆ ಧ್ವಜಾರೋಹಣ ನೆರವೇರಿಸಿದ್ದರು. ನಗರ ವ್ಯಾಪ್ತಿಯಲ್ಲೂ ಅಂಗಡಿ ಮುಂಗಟ್ಟು, ಕಚೇರಿಗಳ ಮೇಲೆ ರಾಷ್ಟ್ರಧ್ವಜ ರಾರಾಜಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.