ADVERTISEMENT

ದಾಂಡೇಲಿ | 42 ಗರ್ಭಿಣಿಯರಿಗೆ ಸೀಮಂತ ಕಾರ್ಯ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 15:07 IST
Last Updated 11 ಜನವರಿ 2024, 15:07 IST
ದಾಂಡೇಲಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಅಭಿಯಾನದ ಕಾರ್ಯಕ್ರಮದಲ್ಲಿ 42 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ತಾಲ್ಲೂಕು ವೈದ್ಯಾಧಿಕಾರಿ ಅನಿಲಕುಮಾರ ನಾಯ್ಕ ನಡೆಸಿಕೊಟ್ಟರು
ದಾಂಡೇಲಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಅಭಿಯಾನದ ಕಾರ್ಯಕ್ರಮದಲ್ಲಿ 42 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ತಾಲ್ಲೂಕು ವೈದ್ಯಾಧಿಕಾರಿ ಅನಿಲಕುಮಾರ ನಾಯ್ಕ ನಡೆಸಿಕೊಟ್ಟರು    

ದಾಂಡೇಲಿ: ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಹಳಿಯಾಳ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ದಾಂಡೇಲಿ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಪ್ರಧಾನಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಯೋಜನೆಯಡಿ ತಾಯಿಯಿಂದ ಮಗುವಿಗೆ ಎಚ್‌ಐವಿ ಹಾಗೂ ಹೈಪಟೈಟಿಸ್ ಹರಡುವಿಕೆ ನಿರ್ಮೂಲನೆ ಆಂದೋಲನ ಕಾರ್ಯಕ್ರಮದ ದಾಂಡೇಲಿ ತಾಯಿ ಮಕ್ಕಳು ಆಸ್ಪತ್ರೆಯಲ್ಲಿ ಬುಧವಾರ ನಡೆಯಿತು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲಕುಮಾರ ನಾಯಕ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ, ಹೆಪಾಟೈಟಿಸ್ ಕಾಯಿಲೆ ಹರಡುವಿಕೆ ಹಾಗೂ ತಡೆಗಟ್ಟುವ ಮಾರ್ಗಗಳ ಕುರಿತು ಮಾಹಿತಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೂಪಾ ತುರಮರಿ, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ, ಎದೆ ಹಾಲಿನ ಮಹತ್ವ, ಮಕ್ಕಳ ಆರೈಕೆ, ಗರ್ಭಿಣಿಯರ ಆರೋಗ್ಯ ಕಾಳಜಿ ಮತ್ತು ಕುಟುಂಬ ಯೋಜನೆ ವಿಧಾನಗಳ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ADVERTISEMENT

ಹಳಿಯಾಳ ಐಸಿಟಿಸಿ ಆಪ್ತ ಸಮಾಲೋಚಕರಾದ ವಾಸು ಎಚ್‌ಐವಿ ಸೋಂಕು ಹರಡುವ ವಿಧಾನ, ತಡೆಗಟ್ಟುವ ಸುರಕ್ಷತಾ ಕ್ರಮಗಳನ್ನು ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ 42 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ನಡೆಸಿಕೊಟ್ಟರು.

ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಅಖಿಲ್ ಕುಮಾರ ಹಾಗೂ ಮಕ್ಕಳ ತಜ್ಞ ಡಾ. ಬಂಟ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ತ್ರಿವೇಣಿ ಹಾಗೂ ಹಳಿಯಾಳ ಬಿಪಿಎಂನ ಚನ್ನಬಸು ಇವರು ಆರೋಗ್ಯ ರಕ್ಷಣೆ ಔಷಧೋಪಚಾರದ ಕುರಿತು ಗರ್ಭಿಣಿಯರಿಗೆ ಉಪಯುಕ್ತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.