ADVERTISEMENT

ಶಿರಸಿ: ಸಂಭ್ರಮದಿಂದ ಬಕ್ರೀದ್ ಆಚರಣೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 15:25 IST
Last Updated 7 ಜೂನ್ 2025, 15:25 IST
ಬಕ್ರೀದ್ ಆಚರಣೆ ಅಂಗವಾಗಿ ಶಿರಸಿಯ ಎಪಿಎಂಸಿ ಆವರಣದಲ್ಲಿರುವ ಪ್ರಾರ್ಥನಾ ಸ್ಥಳದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಬಕ್ರೀದ್ ಆಚರಣೆ ಅಂಗವಾಗಿ ಶಿರಸಿಯ ಎಪಿಎಂಸಿ ಆವರಣದಲ್ಲಿರುವ ಪ್ರಾರ್ಥನಾ ಸ್ಥಳದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು   

ಶಿರಸಿ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಶನಿವಾರ ನಗರದಲ್ಲಿ ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.

ನಗರದ ಎಪಿಎಂಸಿ ಆವರಣದಲ್ಲಿರುವ ಪ್ರಾರ್ಥನಾ ಸ್ಥಳದಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಕಲ ಜೀವರಾಶಿಗೆ ಒಳಿತಾಗುವಂತೆ ದೇವರಿಗೆ ಮೊರೆಯಿಟ್ಟರು.

ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿದ ಮುಸ್ಲಿಮರು, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಆಗಮಿಸಿದ್ದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆ. ಮೌಲ್ವಿ, ಧರ್ಮ ಗುರುಗಳ ಉಪದೇಶ ಆಲಿಸಿ ಹಬ್ಬ ಆಚರಿಸಿದರು. ಪ್ರಾರ್ಥನೆ ಬಳಿಕ ಪರಸ್ಪರ ಆಲಿಂಗಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.