ADVERTISEMENT

ಶಿರಸಿ | ಫೆ.24ರಿಂದ ಬನವಾಸಿ ಕದಂಬೋತ್ಸವ

​ಪ್ರಜಾವಾಣಿ ವಾರ್ತೆ
Published 9 ಜನವರಿ 2024, 9:17 IST
Last Updated 9 ಜನವರಿ 2024, 9:17 IST
<div class="paragraphs"><p>ಸಚಿವ ಮಂಕಾಳ ವೈದ್ಯ</p></div>

ಸಚಿವ ಮಂಕಾಳ ವೈದ್ಯ

   

ಶಿರಸಿ: ಸರ್ಕಾರಿ ಉತ್ಸವಗಳಲ್ಲಿ ಒಂದಾದ ಕದಂಬೋತ್ಸವ ಫೆ.24 ಹಾಗೂ 25ರಂದು ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಯಿತು.

ನಗರದ ಆಡಳಿತ ಸೌಧದಲ್ಲಿ ಮಂಗಳವಾರ ನಡೆದ ಕದಂಬೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವ ವೈದ್ಯ, ಕದಂಬೋತ್ಸವ ನಾಡಿನ ಉತ್ಸವವಾಗಿದೆ. ಬರಗಾಲದ ಸಂದರ್ಭದಲ್ಲಿಯೂ ಈ ಉತ್ಸವಾಚರಣೆ ಮಾಡುವುದು ಇತಿಹಾಸ ತಿಳಿಸುವ ಪ್ರಯತ್ನವಾಗಿದೆ. ಕಾರಣ ಜನರ ಸಹಕಾರವೂ ಅಗತ್ಯ ಎಂದರು. ಕದಂಬೋತ್ಸವ ವೇದಿಕೆಯಲ್ಲಿ ಪ್ರತಿಷ್ಠಿತ ಪಂಪ ಪ್ರಶಸ್ತಿ ವಿತರಣೆಯೂ ನಡೆಯಲಿದ್ದು, ಉತ್ಸವ ಉತ್ಸವ ಉದ್ಘಾಟಿಸುವಂತೆ ಮುಖ್ಯಮಂತ್ರಿ ಬಳಿ ಕೋರಲಾಗುವುದು ಎಂದರು.

ADVERTISEMENT

ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ಅದ್ಧೂರಿ ಉತ್ಸವಾಚರಣೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.

ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.