ADVERTISEMENT

ಮೆಕ್ಕೆಜೋಳ| ಪ್ರತಿ ತಾಲ್ಲೂಕಲ್ಲಿ ಖರೀದಿ ಕೇಂದ್ರ ಆರಂಭಿಸಿ: ಸಂಸದ ಬೊಮ್ಮಾಯಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 0:27 IST
Last Updated 7 ಡಿಸೆಂಬರ್ 2025, 0:27 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಶಿರಸಿ: ‘ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರತಿ ತಾಲ್ಲೂಕಿನಲ್ಲಿ ಆರಂಭಿಸಬೇಕು. ಹೆಚ್ಚುವರಿ ಬೆಂಬಲ ಬೆಲೆ ನೀಡಿ ಸರಕನ್ನು ರೈತರಿಂದ ಖರೀದಿಸಬೇಕು. ರಾಜ್ಯ ಸರ್ಕಾರ ಜವಾಬ್ದಾರಿಯಿಂದ ನಿರ್ವಹಿಸಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. 

‘ಮೆಕ್ಕೇಜೋಳವನ್ನು ಬೆಂಬಲಬೆಲೆ ಯೋಜನೆಯಡಿ ಸರ್ಕಾರ ಖರೀದಿಸುವುದಾಗಿ ಘೋಷಿಸಿದೆ. ಆದರೂ ಬೆಂಬಲ ಬೆಲೆ ಮೊತ್ತ ಕಡಿಮೆಯಾಗಿದ್ದು, ಹೆಚ್ಚುವರಿ ದರಕ್ಕಾಗಿ ರೈತರು ಹೋರಾಟ ನಡೆಸಿದ್ದಾರೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಕಳೆದ ವರ್ಷ ರಾಜ್ಯದಲ್ಲಿ 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಮೆಕ್ಕೆಜೋಳ ಬೆಳೆಯಲಾಗಿತ್ತು. ಈ ವರ್ಷ 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಬೆಳೆಯಲಾಗಿದೆ. 2 ಲಕ್ಷ ಮೆಟ್ರಿಕ್ ಟನ್ ನಷ್ಟ ಆಗಿದೆ. ಇಂತಹ ಸಂದರ್ಭದಲ್ಲಿ ರೈತರನ್ನು ಉಳಿಸಲು ರಾಜ್ಯ ಸರ್ಕಾರ ಆದ್ಯತೆ ನೀಡಬೇಕು. ಆದರೆ, ಸರ್ಕಾರಕ್ಕೆ ರೈತಪರ ಚಿಂತನೆಯಿಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.