ADVERTISEMENT

ಸಭಾಪತಿ ಸ್ಥಾನದಿಂದ ಇಳಿಸಲು ಯತ್ನಿಸಿದರೆ ರಾಜೀನಾಮೆ ನೀಡುವೆ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 4:23 IST
Last Updated 30 ಆಗಸ್ಟ್ 2025, 4:23 IST
<div class="paragraphs"><p>ಬಸವರಾಜ ಹೊರಟ್ಟಿ</p></div>

ಬಸವರಾಜ ಹೊರಟ್ಟಿ

   

ಶಿರಸಿ: ‘ವಿಧಾನ ಪರಿಷತ್ತಿನಲ್ಲಿ ಈ ಹಿಂದೆ ಪಕ್ಷಗಳ ಬಲಾಬಲ ಬದಲಾದರೂ ಸಭಾಪತಿಗೆ ಬದಲಿಸಿರಲಿಲ್ಲ. ಈಗ ಕಾಂಗ್ರೆಸ್‍ಗೆ ಬಹುಮತ ಬಂದರೂ ನನಗೆ ಆತಂಕವಿಲ್ಲ. ನನ್ನನ್ನು ಸಭಾಪತಿ ಸ್ಥಾನದಿಂದ ಇಳಿಸಲು ಪ್ರಯತ್ನಿಸಿದರೆ, ತಕ್ಷಣವೇ ರಾಜೀನಾಮೆ ನೀಡುವೆ’ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

‘ಒಂದು ವರ್ಷ ಅಥವಾ ಹತ್ತು ವರ್ಷ ಸಭಾಪತಿಯಾದರೂ ಅಧಿಕಾರದ ಬಳಿಕ, ಮಾಜಿ ಎನ್ನುತ್ತಾರೆ. ಈ ಹಿಂದೆ ವಿ.ಎಸ್.ಉಗ್ರಪ್ಪ ಮತ್ತು ಡಿ.ಎಚ್.ಶಂಕರಮೂರ್ತಿ ಅವರನ್ನು ಪಕ್ಷ ಬಲಾಬಲ ಬದಲಾದಾಗ ಅಧಿಕಾರದಿಂದ ಇಳಿಸಲಾಗಿತ್ತು. ಈಗ ಕಾಂಗ್ರೆಸ್ ಅಂಥ ಕೆಲಸ ಮಾಡಿದಲ್ಲಿ, ಇತಿಹಾಸ ನಿರ್ಮಿಸಿದಂತಾಗುತ್ತದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. 

ADVERTISEMENT

‘ಇಂದು ಪರಿಷತ್‍ನಲ್ಲಿ ಅಲ್ಲದೇ, ಎಲ್ಲಿಯೂ ಮೌಲ್ಯ ಉಳಿದಿಲ್ಲ. ಎಲ್ಲವೂ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ  ಕಾಲದಲ್ಲೇ ಮುಗಿದಿದೆ. ಈಗ ಹಣದ ಮತ ಹಾಕುವುದು, ಪಡೆಯುವುದು ನಡೆದಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.