ADVERTISEMENT

ಬಂದರು ಅಭಿವೃದ್ಧಿಯಾದರೆ ಉತ್ತರಕರ್ನಾಟಕದ ವಾಣಿಜ್ಯ ಅಭಿವೃದ್ಧಿಗೆ ಅನುಕೂಲ: ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 8:32 IST
Last Updated 19 ಅಕ್ಟೋಬರ್ 2020, 8:32 IST
ಸಚಿವ ಜಗದೀಶ ಶೆಟ್ಟರ್
ಸಚಿವ ಜಗದೀಶ ಶೆಟ್ಟರ್   

ಶಿರಸಿ: ಕರಾವಳಿ ಆರ್ಥಿಕ ವಲಯದಡಿಅಂಕೋಲಾ ತಾಲ್ಲೂಕಿನ ಬೇಲೇಕೆರಿ ಬಂದರನ್ನು ಸರ್ವ ಋತು ಬಂದರು ಆಗಿ ರೂಪಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದುಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಂದರು ಅಭಿವೃದ್ಧಿಯಾದರೆ ಉತ್ತರ ಕರ್ನಾಟಕದ ವಾಣಿಜ್ಯ ಅಭಿವೃದ್ಧಿಗೆ ಅನುಕೂಲವಾಗಲಿದೆ. ಹೀಗಾಗಿ ಸರ್ಕಾರ ಈ ಬಗ್ಗೆ ಹೆಚ್ಚು ಆಸಕ್ತಿ ತಳೆದಿದೆ ಎಂದರು.

ಕಾಯ್ದೆಗಳನ್ನು ರೂಪಿಸುವಾಗ ಎಲ್ಲ ಸಂದರ್ಭದಲ್ಲೂ ವಿರೋಧ ಪಕ್ಷದ ಸಲಹೆ ಕೇಳಬೇಕೆಂದಿಲ್ಲ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದನ್ನು ಸಮರ್ಥಿಸಿಕೊಂಡರು. ಕಾಂಗ್ರೆಸ್ ಮುಖಂಡರು ಪದೇ ಪದೇ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಎಪ್ಪತ್ತು ವರ್ಷ ಆಡಳಿತ ನಡೆಸಿದವರು ಜನಪರ ಕಾಯ್ದೆ ರಚಿಸಲು ಸಾಧ್ಯವಾಗಿರಲಿಲ್ಲ. ಈಗ ಮಾತನಾಡುತ್ತಿದ್ದಾರೆ ಎಂದರು.

ADVERTISEMENT

ಜನಪರ ಮಸೂದೆಗಳನ್ನು ಮಂಡಿಸುವಾಗ ಮೇಲ್ಮನೆಯಲ್ಲಿ ವಿಪಕ್ಷಗಳ ಸಹಕಾರ ಸಿಕ್ಕರಲಿಲ್ಲ ಎಂದರು.ಮತದಾರರು ಮೊದಲ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಅವರಿಗೆ ನೀಡಬೇಕು ಎಂದು ವಿನಂತಿಸಿದರು.

ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತ ಯಾಚಿಸಿದ್ದೇವೆ. ನಾಲ್ಕು ಜಿಲ್ಲೆಗಳಲ್ಲೂ ಬೆಂಬಲಿಸುವ ವಿಶ್ವಾಸ ವ್ಯಕ್ತವಾಗಿದೆ. ೭೫ ಸಾವಿರ ಮತದಾರರಿದ್ದು ಅಭೂತಪೂರ್ವ ಗೆಲುವು ನಿಚ್ಚಳವಾಗಿದೆ ಎಂದರು.

ಕನೂರು ಆರು ವರ್ಷಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸದನದಲ್ಲೂ ಧ್ವನಿ ಎತ್ತಿದ್ದಾರೆ. ಅಧಿಕಾರದಲ್ಲಿರುವದರಿಂದ ಸಂಕನೂರು ಗೆಲ್ಲಿಸಿದರೆ ಮತ್ತಷ್ಟು ಅಭಿವೃದ್ಧಿ ಸಾಧ್ಯವಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಸಂಸದ ಅನಂತಕುಮಾರ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ,ಹೆಗಡೆ, ಅಭ್ಯರ್ಥಿ ಎಸ್.ವಿ.ಸಂಕನೂರು, ಪ್ರಮುಖರಾದ ವಿ.ಎಸ್.ಪಾಟೀಲ, ಸುನೀಲ ಹೆಗಡೆ, ವೆಂಕಟೇಶ ನಾಯಕ, ಕೆ.ಜಿ.ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.