ADVERTISEMENT

ಭಗವದ್ಗೀತಾ ಅಭಿಯಾನ ಮಹಾಸಮರ್ಪಣಾ ಸಮಾರಂಭ ಜ.4ರಂದು

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2024, 13:11 IST
Last Updated 27 ಡಿಸೆಂಬರ್ 2024, 13:11 IST

ಯಲ್ಲಾಪುರ: ಪಟ್ಟಣದ ಹುಲ್ಲೋರಮನೆ ಗಜಾನನ-ಮಾರುತಿ ದೇವಾಲಯದ ಆವಾರದಲ್ಲಿ ಜನವರಿ 4ರಂದು ಮಧ್ಯಾಹ್ನ 2-30ಕ್ಕೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನ ಮಹಾಸಮರ್ಪಣಾ ಸಮಾರಂಭ ನಡೆಯಲಿದೆ.

ಸ್ವರ್ಣವಲ್ಲಿಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ, ನೆಲೆಮಾವು ಮಠದ ಮಾಧವಾನಂದ ಭಾರತೀ ಸ್ವಾಮೀಜಿ, ಶಿರಳಗಿಯ ಬ್ರಹ್ಮಾನಂದ ಭಾರತೀ ಸ್ವಾಮೀಜಿ ಪಾಲ್ಗೊಳ್ಳುವರು.

ಸಮಾರಂಭದಲ್ಲಿ ಸಾವಿರಾರು ಜನರಿಂದ ಏಕಕಾಲದಲ್ಲಿ ಭಗವದ್ಗೀತಾ ಪಠಣ ನಡೆಯಲಿದೆ. ಭಗವದ್ಗೀತಾ ಪಠಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.