ಸಾಂದರ್ಭಿಕ ಚಿತ್ರ
– ಐ ಸ್ಟಾಕ್ ಚಿತ್ರ
ಭಟ್ಕಳ: ತಾಲ್ಲೂಕಿನ ಜಾಲಿ ದೇವಿನಗರದ ಪದ್ಮಾ ಮಾದೇವ ನಾಯ್ಕ ಎಂಬುವರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಹಣ ಕಳ್ಳತನವಾದ ಘಟನೆ ನಡೆದಿದೆ.
‘ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲ ಬೀಗ ಒಡೆದು ಒಳಗೆ ನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ 86 ಗ್ರಾಂ ಬಂಗಾರದ ಆಭರಣ, 14 ಗ್ರಾಂ ಬೆಳ್ಳಿ ಆಭರಣ ಹಾಗೂ ₹10 ಸಾವಿರ ನಗದು ಸೇರಿ ಅಂದಾಜು ₹8.80 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಪ್ರಕರಣ ದಾಖಲಾದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಸಹಾಯದಿಂದ ಪರಿಶೀಲನೆ ನಡೆಸಿದರು.
ಯುವಕ ಆತ್ಮಹತ್ಯೆ: ತಾಲ್ಲೂಕಿನ ಮೂಡಭಟ್ಕಳಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಡಳ್ಳಿ ನಿವಾಸಿ ಲೋಕೇಶ್ ಮಾಯಪ್ಪ ತೇವರ (34) ಮೃತ.
‘ಮದ್ಯ ವ್ಯಸನದಿಂದ ಲೋಕೇಶ್ ಗೂಡಂಗಡಿ ಶೆಡ್ಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.