
ಪ್ರಜಾವಾಣಿ ವಾರ್ತೆಕಳ್ಳತನ
ಭಟ್ಕಳ: ಮುರುಡೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಬೈಕ್ ಸವಾರರೊಬ್ಬರನ್ನು ಅಡ್ಡಗಟ್ಟಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿರುವುದಾಗಿ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ಗುಮ್ಮನಹಕ್ಕಲ ನಿವಾಸಿ ಅರುಣಕುಮಾರ ಭಾಸ್ಕರ ನಾಯ್ಕ ಸರ ಕಳೆದುಕೊಂಡವರು. ಬೈಕ್‌ಗೆ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಬರುವಾಗ ಹೆದ್ದಾರಿಯಲ್ಲಿ 4 ಮಂದಿ ಅಡ್ಡಗಟ್ಟಿದರು. ಅವರೆಲ್ಲರೂ ಲಿಂಗತ್ವ ಅಲ್ಪಸಂಖ್ಯಾತರಾಗಿದ್ದರು ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
‘ಹಣ ಕೇಳುವ ನೆಪದಲ್ಲಿ ಅಸಭ್ಯವಾಗಿ ವರ್ತಿಸಿ 15 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.