ಬಂಧನ
ಭಟ್ಕಳ: ತಾಲ್ಲೂಕಿನ ಶೇಡಬರಿ ಜಟಕಾ ಮಹಾಸತಿ ದೇವಸ್ಥಾನದಲ್ಲಿ ಸೋಮವಾರ ನಡೆದಿದ್ದ ಕಳವು ಪ್ರಕರಣವನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿರಾಲಿಯ ಅಮೀರ್ ಹಸನ್ ಬ್ಯಾರಿ (27) ಹಾಗೂ ಮುಗ್ದಂ ಕಾಲೊನಿಯ ಮಹ್ಮದ್ ಇಮ್ರಾನ್ ಅಬ್ದುಲ್ ಗಫರ್ (24) ಬಂಧಿತರು.
ಈ ಕುರಿತು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರ ದೂರು ಆಧರಿಸಿ ಗ್ರಾಮೀಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಸಿಪಿಐ ಮಂಜುನಾಥ ಲಿಂಗಾರೆಡ್ಡಿಯ ನೇತೃತ್ವದ ತಂಡವು ಇಬ್ಬರನ್ನೂ ಬಂಧಿಸಿ, ಅವರಿಂದ ₹1.80 ಲಕ್ಷ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.