
ಭಟ್ಕಳ: ‘ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ ಹಕ್ಕಿಗೆ ಮೂರು ತಲೆಮಾರಿನ ನಿರ್ದಿಷ್ಟ ವೈಯಕ್ತಿಕ ದಾಖಲೆಗೆ ಒತ್ತಾಯಿಸಬಾರದು. ಇಂತಹ ಪ್ರಕ್ರಿಯೆ ಕಾನೂನಿಗೆ ವ್ಯತಿರಿಕ್ತವಾಗಿದೆ’ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ಅರಣ್ಯವಾಸಿಗಳ ಕಾನೂನು ಜಾಗೃತ ಜಾಥ ನಡೆಸಿ, ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಹೇಟಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
2012ರಲ್ಲಿಯೇ ನಿರ್ದಿಷ್ಟ ದಾಖಲೆಗಳಿಗೆ ಒತ್ತಾಯಿಬಾರದು ಎಂದು ಕಾಯ್ದೆ ತಿದ್ದುಪಡಿಯಾಗಿದ್ದು, ಇದಕ್ಕೆ ಪೂರಕವಾಗಿ ಗುಜಾರತ್ ನ್ಯಾಯಾಲಯ ದಾಖಲೆಗೆ ಒತ್ತಾಯಿಸಲು ಅವಕಾಶವಿಲ್ಲ ಎಂದು ಉಲ್ಲೇಖಿಸಿದೆ. ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯದ ಆದೇಶದಲ್ಲಿ ಮಂಜೂರಿ ಪ್ರಕ್ರಿಯೆಯಲ್ಲಿ ದಾಖಲೆಗಳಿಗೆ ಆಗ್ರಹಿಸಿ ಅರ್ಜಿಗಳನ್ನು ತಿರಸ್ಕರಿಸುವುದು ಸಮಂಜಸವಲ್ಲ ಎಂದು ತಿಳಿಸಿದೆ’ ಎಂದು ಹೇಳಿದರು.
ಜಿಲ್ಲಾ ಸಂಚಾಲಕ ಪಾಂಡುರಂಗ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಂಚಾಯಕ ದೇವರಾಜ ಗೊಂಡ ವಂದಿಸಿದರು. ಜಿಲ್ಲಾ ಸಂಚಾಲಕ ಇಬ್ರಾಹೀಂ ಗೌಡಳ್ಳಿ, ರಪೀಕ್, ನವೀನ್ ಜೈನ್, ಈಶ್ವರ ನಾಯ್ಕ ಹಾಡವಳ್ಳಿ, ಚಂದ್ರ ನಾಯ್ಕ ಬೈರೋಳೆ, ರತ್ನ ನಾಯ್ಕ, ರಾಘವೇಂದ್ರ ಮರಾಠಿ, ವಿಮಲಾ ಮೋಗೇರ, ಕವಿತಾ ಮಂಜುನಾಥ ಗೋಂಡ, ನಾಗಮ್ಮ ಮೋಗೇರ, ದತ್ತ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.