ADVERTISEMENT

ಶಿರಸಿ: ಬಿಜೆಪಿ ಯಶಸ್ಸು ಕಾಂಗ್ರೆಸ್‌ಗೆ ನುಂಗಲಾರದ ತುತ್ತು: ವೆಂಕಟೇಶ ನಾಯಕ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 12:02 IST
Last Updated 1 ಆಗಸ್ಟ್ 2020, 12:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿರಸಿ: ಕೋವಿಡ್ 19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್‌ಡೌನ್ ವಿಫಲವಾಗುತ್ತದೆ ಎಂದು ನಂಬಿದ್ದ ಕಾಂಗ್ರೆಸ್ ಪಕ್ಷದವರ ನಂಬಿಕೆಯೇ ವಿಫಲವಾಗಿದೆ. ಹೀಗಾಗಿ, ವಿನಾಕಾರಣ ಬಿಜೆಪಿಯವರ ಮೇಲೆ ಆರೋಪ ಮಾಡುತ್ತಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ‘ಬಿಜೆಪಿ ಹೆಣದ ಮೇಲೆ ಕುಳಿತು ಹಣ ಮಾಡುವ ಪಕ್ಷ’ ಎಂಬ ಹೇಳಿಕೆಯನ್ನು ಖಂಡಿಸಿದರು. ಸರ್ಕಾರ ಜಾರಿಗೊಳಿಸಿದ್ದ ಲಾಕ್‌ಡೌನ್ ಸಫಲವಾಗಿದೆ. ಇದು ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ, ಬಿಜೆಪಿ ವಿರುದ್ಧ ಹುಳುಕು ಹುಡುಕಲು ಪ್ರಾರಂಭಿಸಿದ್ದಾರೆ. ಗಲಾಟೆ, ಅಕ್ರಮಗಳ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷದವರು ಇಂತಹ ಹೇಳಿಕೆ ನೀಡುವುದು ಹಾಸ್ಯಾಸ್ಪದ’ ಎಂದರು.

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದವರಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂಧ 19,700 ಆಹಾರ ಕಿಟ್ ವಿತರಿಸಲಾಗಿದೆ. 1.17 ಲಕ್ಷ ರೇಷನ್ ಕಿಟ್, 12,800 ಮುಖಗವಸು, ಸ್ಯಾನಿಟೈಸರ್ ನೀಡಲಾಗಿದೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಾಕಷ್ಟು ಕೆಲಸ ಮಾಡಿದ್ದಾರೆ ಎಂದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಪ್ರಮುಖರಾದ ಆರ್.ಡಿ.ಹೆಗಡೆ, ಎಂ.ಎಸ್.ಹೆಗಡೆ,ಚಂದ್ರು ದೇವಾಡಿಗ, ರಾಜೇಶ ಶೆಟ್ಟಿ, ಶ್ರೀರಾಮ ನಾಯ್ಕ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.