ADVERTISEMENT

ಸಮಸ್ಯೆ ನಿವಾರಣೆಗೆ ಬಿಜೆಪಿ ಬಿಡಲೇ ಇಲ್ಲ

ಅರಣ್ಯ ಕಾಯ್ದೆಗೆ ಲೋಕಸಭೆಯಲ್ಲಿ ತಿದ್ದುಪಡಿ ಅಗತ್ಯ: ಸಿ.ಎಂ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2019, 14:14 IST
Last Updated 18 ಏಪ್ರಿಲ್ 2019, 14:14 IST
ಕುಮಟಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು.
ಕುಮಟಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು.   

ಕುಮಟಾ: ‘ಅರಣ್ಯ ಅತಿಕ್ರಮಣಕಾರರ ಹಕ್ಕುಪತ್ರ ಸಮಸ್ಯೆ ನಿವಾರಣೆಗೆ ಜಿಲ್ಲೆಗೆ ಬರಲು ಬಿಜೆಪಿ ನಾಯಕರು ಬಿಡಲೇ ಇಲ್ಲ. ಸಮ್ಮಿಶ್ರ ಸರ್ಕಾರವನ್ನು ತೆಗೆಯಲು ಹೊರಟ ಪುಣ್ಯಾತ್ಮರು,ಇದರತ್ತ ಗಮನ ಹರಿಸಲು ಬಿಡಲಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಲೋಕಸಭಾ ಚುನಾವಣೆಗೆಮೈತ್ರಿ ಕೂಟದ ಅಭ್ಯರ್ಥಿಜೆಡಿಎಸ್‌ನ ಆನಂದ ಅಸ್ನೋಟಿಕರ್ ಪರಗುರುವಾರಮತಯಾಚನೆ ಮಾಡಿ ಅವರು ಮಾತನಾಡಿದರು.

‘ಅರಣ್ಯ ಹಕ್ಕು ಕಾಯ್ದೆಗೆ ಲೋಕಸಭೆಯಲ್ಲಿ ತಿದ್ದುಪಡಿ ಮಾಡಬೇಕು. ಈ ಬಗ್ಗೆ ಸಂಸದ ಅನಂತಕುಮಾರ ಹೆಗಡೆ ಯಾವತ್ತಾದರೂ ಪ್ರಶ್ನೆ ಮಾಡಿದ್ದಾರಾ? ಕೀಳುಮಟ್ಟದ, ಅನಾಗರಿಕ ಮಾತುಗಳನ್ನು ಆಡುವ ಮೂಲಕ ನಿಮ್ಮ ಮತಕ್ಕೆಎಷ್ಟುಗೌರವಯುತವಾಗಿ ನಡೆದುಕೊಂಡಿದ್ದಾರೆ? ಅವರು ರೈತ, ದಲಿತ, ಹಿಂದುಳಿದವರ ಉದ್ಧಾರಕ್ಕೆ ಸಂಬಂಧಿಸಿದಂತೆ ಒಂದು ದಿನವೂ ಕೆಲಸ ಮಾಡಿಲ್ಲ’ ಎಂದು ಆರೋಪಿಸಿದರು.

ADVERTISEMENT

‘ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ಬಹುಮತ ನೀಡಿ ಎಂದು ಕೇಳುತ್ತಿದ್ದಾರೆ. ಆದರೆ, ಈ ಹಿಂದೆ ಸಮ್ಮಿಶ್ರ ಸರ್ಕಾರದ ಚುಕ್ಕಾಣಿ ಹಿಡಿದ ಇಂದಿರಾ ಗಾಂಧಿ, ಜವಾಹರಲಾಲ್ ನೆಹರೂ, ಲಾಲ್ ಬಹಾದ್ದೂರ್ ಶಾಸ್ತ್ರಿ ಮುಂತಾದವರು ಸ್ಥಿರ ಆಡಳಿತ ಕೊಟ್ಟಿಲ್ಲವೇ’ ಎಂದು ಪ್ರಶ್ನಿಸಿದರು.

‘ಲೂಟಿ ಮಾಡಿದ ಹಣ’:ಶಿರಸಿಯಲ್ಲಿ ಬಿಜೆಪಿ ಮುಖಂಡರ ಮನೆಯಲ್ಲಿ ₹82 ಲಕ್ಷ ಜಪ್ತಿ ಮಾಡಿಕೊಂಡ ಪ್ರಕರಣ ಸಂಬಂಧ ಮಾತನಾಡಿದ ಕುಮಾರಸ್ವಾಮಿ, ‘ಕೇಂದ್ರದಲ್ಲಿ ಮಂತ್ರಿಯಾಗಿ ಅನಂತಕುಮಾರ ಹೆಗಡೆ ಲೂಟಿ ಮಾಡಿದ್ದಾರೆ. ಮತದಾರರನ್ನುಹಣ ನೀಡಿ ಖರೀದಿ ಮಾಡಲು ಮುಂದಾಗಿದ್ದಾರೆ. ಅವರ ‍ಪಕ್ಷದ ಮುಖಂಡರ ಮನೆಯಲ್ಲಿ ₹ 5 ಸಾವಿರದಂತೆ ತುಂಬಲಾಗಿದ್ದಕವರ್‌ಗಳು ಸಿಕ್ಕಿವೆ. ಅವರೊಂದಿಗೆ ಈಗ ಮತ ತರುವ ಯುವಕರಿಲ್ಲ. ಹಾಗಾಗಿ ಹಣ ಹಂಚಲು ಮುಂದಾಗಿದ್ದಾರೆ’ ಎಂದು ಟೀಕಿಸಿದರು.

ಇದಕ್ಕೂ ಮೊದಲು,ಕುಮಾರಸ್ವಾಮಿ ಅವರಿದ್ದ ಹೆಲಿಕಾಪ್ಟರ್ ಕುಮಟಾದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಹೆಲಿಪ್ಯಾಡ್‌ನಲ್ಲಿ ಇಳಿಯಿತು. ಬಳಿಕಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.