
ಪ್ರಜಾವಾಣಿ ವಾರ್ತೆ
ಶಿರಸಿ: ‘ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನು ಖುಷಿ ಪಡಿಸಲು ಕೇಂದ್ರ ಬಿಜೆಪಿ ನಾಯಕರು ಕೆಲಸ ಮಾಡುತ್ತಿದ್ದಾರೆ. ಇವರಿಬ್ಬರೂ ಜೀರೋ ಎಂಬುದು ಯಾವಾಗ ಜ್ಞಾನೋದಯ ಆಗುತ್ತದೆಯೋ ಗೊತ್ತಿಲ್ಲ. ಯಡಿಯೂರಪ್ಪ ಹಾಗೂ ವಿಜಯೇಂದ್ರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ 40 ಸ್ಥಾನಕ್ಕೆ ತೃಪ್ತಿಪಡಬೇಕು’ ಎಂದು ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಅವರು ಶನಿವಾರ ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿ, ‘ಯಡಿಯೂರಪ್ಪನವರ ಚೇಲಾಗಿರಿ ನಾನು ಮಾಡುವುದಿಲ್ಲ. ಸ್ವಾಭಿಮಾನದಿಂದ ಇದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಯೋಗಿ ಆದಿತ್ಯನಾಥ, ಆರ್‌ಎಸ್‌ಎಸ್ ನನ್ನ ಆದರ್ಶ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಅಧ್ಯಕ್ಷಗಿರಿಯಿಂದ ಇಳಿಸಿ, ಮನೆಯಲ್ಲಿ ಕುಳಿಸುವವರೆಗೆ ನಾನು ಬಿಜೆಪಿಗೆ ಹೋಗುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.