ಕಾರವಾರ: ‘ಅಹಿಂಸೆಯ ಮೂಲಕ ಹೋರಾಟದ ಹಾದಿ ಬಲಗೊಳಿಸಿದ ಮಹಾತ್ಮ ಗಾಂಧೀಜಿ, ದಕ್ಷ ಆಡಳಿತದ ಮೂಲಕ ದೇಶ ಮುನ್ನಡೆಸಿದ ಲಾಲ್ ಬಹದ್ದೂರ್ ಶಾಸ್ತ್ರೀಜಿ ದೇಶ ಎಂದಿಗೂ ಮರೆಯದ ರತ್ನಗಳು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸ್ವಾತಂತ್ರ್ಯ ಸಂಗ್ರಾಮವನ್ನ ಜನಾಂದೋಲನವಾಗಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಕೊಡುಗೆ ಬಹು ದೊಡ್ಡದು. ಪ್ರಾಮಾಣಿಕತೆ ಮೂಲಕ ಆಳುವ ವರ್ಗಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಕೊಡುಗೆ ಮರೆಯಲಾಗದ್ದು’ ಎಂದರು.
ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ದೇವಳಮಕ್ಕಿಯಲ್ಲಿ ಸ್ವಚ್ಛತಾ ಶ್ರಮದಾನ, ಗ್ರಾಮೀಣ ಜನರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಸಲಾಯಿತು.
ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ, ಬಿಜೆಪಿ ನಗರ ಮಂಡಳದ ಅಧ್ಯಕ್ಷ ನಾಗೇಶ್ ಕುರ್ಡೆಕರ, ಗ್ರಾಮೀಣ ಮಂಡಳದ ಅಧ್ಯಕ್ಷ ಸುಭಾಷ ಗುನಗಿ, ವಿ.ಎಂ.ಹೆಗಡೆ, ಅಶೋಕ ಗೌಡ, ದೇವಿದಾಸ ಕಂತ್ರೇಕರ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.