ADVERTISEMENT

ಮುನ್ನೆಚ್ಚರಿಕೆ ಡೋಸ್ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 14:41 IST
Last Updated 10 ಜನವರಿ 2022, 14:41 IST
ಕಾರವಾರದ ಬೈತಖೋಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಕೋವಿಡ್ ಲಸಿಕೆಯ ಮುನ್ನೆಚ್ಚರಿಕಾ ಡೋಸ್ ಅಭಿಯಾನದಲ್ಲಿ ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ ಲಸಿಕೆ ಪಡೆದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ, ಆರ್.ಸಿ.ಎಚ್ ಡಾ.ರಮೇಶ್ ರಾವ್, ನಗರಸಭೆ ಆಯುಕ್ತ ಆರ್.ಪಿ.ನಾಯ್ಕ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೂರಜಾ ನಾಯ್ಕ ಇದ್ದಾರೆ.

ಕಾರವಾರ: ಕೋವಿಡ್ ನಿಯಂತ್ರಣದಲ್ಲಿ ತೊಡಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕಾ ಡೋಸ್‌ಗಳನ್ನು ನೀಡುವ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಜಿಲ್ಲೆಯಲ್ಲಿ ಮೊದಲ ದಿನ 4,221 ಮಂದಿ ಲಸಿಕೆ ಪಡೆದಿದ್ದಾಗಿ ‘ಕೋವಿನ್’ ಪೋರ್ಟಲ್‌ನಲ್ಲಿ ಉಲ್ಲೇಖಿಸಲಾಗಿದೆ.

ನಗರದಲ್ಲಿ ಹಮ್ಮಿಕೊಂಡ ಅಭಿಯಾನಕ್ಕೆ ಬೈತಖೋಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ ಮೊದಲಿಗರಾಗಿ ಲಸಿಕೆ ಪಡೆದುಕೊಂಡರು.

ಮೊದಲ ಎರಡು ಡೋಸ್‍ಗಳಲ್ಲಿ ಪಡೆದಿರುವ ಕಂಪನಿಯ ಲಸಿಕೆಯನ್ನೇ ಮುನ್ನೆಚ್ಚರಿಕಾ ಡೋಸ್ ಆಗಿ ನೀಡಲಾಗುತ್ತದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು, ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಕಾರವಾರದ ವೈದ್ಯಕೀಯ ವಿಜ್ಞಾನ ಕೇಂದ್ರದಲ್ಲಿ ನೀಡಲಾಗುತ್ತಿದೆ.

ADVERTISEMENT

ದಂಡ ವಸೂಲಿ: ಕೋವಿಡ್ ನಿಯಮ ಉಲ್ಲಂಘಿಸಿ, ಮುಖಗವಸು ಧರಿಸದೇ ಸಾರ್ವಜನಿಕವಾಗಿ ಸಂಚರಿಸುತ್ತಿದ್ದವರ ವಿರುದ್ಧ ಜಿಲ್ಲೆಯಾದ್ಯಂತ ಪೊಲೀಸರು ಕ್ರಮ ಕೈಗೊಳುತ್ತಿದ್ದಾರೆ. ಜಿಲ್ಲೆಯಾದ್ಯಂತ ಸೋಮವಾರ 185 ಪ್ರಕರಣಗಳಲ್ಲಿ ಒಟ್ಟು ₹ 18,500 ದಂಡ ವಸೂಲಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.