ಶಿರಸಿ: ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾದ ಧರ್ಮಸ್ಥಳ ಸಾರಿಗೆ ಘಟಕದ ಬಸ್ ನಿರ್ವಾಹಕರೊಬ್ಬರು ಸೋಮವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಉಜಿರೆಯ ಅವ್ವಪ್ಪ ಬಗಳೂರು (49) ಮೃತ ನಿರ್ವಾಹಕರು. ಧರ್ಮಸ್ಥಳದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್‍ನಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇಲ್ಲಿನ ಕೋಟೆಕೆರೆ ಸಮೀಪ ಬಸ್ ತೆರಳುತ್ತಿದ್ದಾಗ ಎದೆ ನೋವು ತಡೆಯಲಾರದೆ ಚೀರಾಡಿದ್ದರು. ಅವರನ್ನು ಆಟೊದಲ್ಲಿ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯರು ಕರೆದೊಯ್ದಿದ್ದರು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಶಿರಸಿ ಸಾರಿಗೆ ಘಟಕದ ಸಿಬ್ಬಂದಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.