ADVERTISEMENT

ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬಸ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2019, 14:46 IST
Last Updated 13 ಜುಲೈ 2019, 14:46 IST
ಮೋರಿಗೆ ಬಿದ್ದ ಬಸ್ ಅನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು
ಮೋರಿಗೆ ಬಿದ್ದ ಬಸ್ ಅನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು   

ಶಿರಸಿ: ತಾಲ್ಲೂಕಿನ ಗೋಳಿಮಕ್ಕಿ ರಸ್ತೆಯಲ್ಲಿ ಹಣಜಿಮನೆ ಸಮೀಪ ಶನಿವಾರ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಮೋರಿಗೆ ಬಿದ್ದು 30ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಎದುರಿನಿಂದ ಬಂದ ವಾಹನವನ್ನು ತಪ್ಪಿಸುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣದ ತಪ್ಪಿದ ಬಸ್ ಮೋರಿಗೆ ಜಾರಿದೆ. ನಂತರ ಬಸ್‌ ಅನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು. ಎರಡೂ ಇಕ್ಕೆಲಗಳಲ್ಲಿ ಅಡಿಕೆ ತೋಟವಿದ್ದು, ನಡುವಿನ ರಸ್ತೆಯಲ್ಲಿ ಏಕಕಾಲಕ್ಕೆ ಒಂದು ಬಸ್ ಹೋಗುವಷ್ಟು ಅಗಲವಾದ ಜಾಗವಿದೆ. ಇದೇ ಕಾರಣಕ್ಕೆ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT