ಸಾಂದರ್ಭಿಕ ಚಿತ್ರ
ಶಿರಸಿ: ತಾಲ್ಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಪ್ರವಾಸಕ್ಕೆಂದು ಹೊರಟಿದ್ದ ವಿದ್ಯಾರ್ಥಿಗಳನ್ನು ತುಂಬಿದ್ದ ಬಸ್ ಪಲ್ಟಿಯಾಗಿದ್ದು, 12 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳ:ವಾರ ನಡೆದಿದೆ.
ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದರು. ಘಟನೆಯಲ್ಲಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಡಿ.28ರಂದು ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಬಂದು, ಅಲ್ಲಿಂದ ಯಾಣ ಹಾಗೂ ವಿಭೂತಿ ಜಲಪಾತಕ್ಕೆ ತೆರಳಬೇಕಿತ್ತು. ಆದರೆ ಮಾರ್ಗಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಬಸ್ ಗಾಜು ಸಂಪೂರ್ಣ ಪುಡಿಯಾಗಿದ್ದು, ಹಲವರು ಸಣ್ಣ ಪುಟ್ಟ ಗಾಯಗೊಂಡಿದ್ದಾರೆ. 50 ಜನ ವಿದ್ಯಾರ್ಥಿಗಳು ಒಂದು ಬಸ್ ಹಾಗೂ ಒಂದು ಟಿಟಿ ಮೂಲಕ ಪ್ರವಾಸ ಬೆಳೆಸಿದ್ದರು. ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.