ಯಲ್ಲಾಪುರ: ಯಲ್ಲಾಪುರ-ಹಳಿಯಾಳ ರಾಜ್ಯ ಹೆದ್ದಾರಿಯ ಕಣ್ಣಿಗೇರಿ ಸಮೀಪ ಮಂಗಳವಾರ ಸಾರಿಗೆ ಸಂಸ್ಥೆಯ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 24 ಜನರಿಗೆ ಸಣ್ಣಪುಟ್ಟ ತರಚು ಗಾಯಗಳಾಗಿವೆ. ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ಸು ಶಿರಸಿಯಿಂದ ಹಳಿಯಾಳ ಮಾರ್ಗವಾಗಿ ಬೆಳಗಾವಿಗೆ ಹೊರಟಿತ್ತು.
ಶಿಕ್ಷಕ ಪ್ರಕಾಶ ಶೀನಾ ಪೂಜಾರಿ ಬಸ್ ಚಾಲಕ ಗದಗ ಜಿಲ್ಲೆಯ ರೋಣದ ಅಶೋಕ ಸಂಗಪ್ಪ ದೊಡ್ಡಣ್ಣವರ ವಿರುದ್ಧ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.