ADVERTISEMENT

ಅಂಕೋಲಾ | ಬಸ್–ಟ್ಯಾಂಕರ್ ಡಿಕ್ಕಿ: ಇಬ್ಬರು ಸಾವು, 9 ಮಂದಿಗೆ ಗಂಭೀರ ಗಾಯ

ಖಾಸಗಿ ಆಸ್ಪತ್ರೆಗಳಿಗೆ ದಾಖಲು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 4:25 IST
Last Updated 19 ಸೆಪ್ಟೆಂಬರ್ 2025, 4:25 IST
ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲು ಸಮೀಪ ಬಸ್–ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಜನರು ಸೇರಿದ್ದರು
ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲು ಸಮೀಪ ಬಸ್–ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಜನರು ಸೇರಿದ್ದರು   

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ–63ರಲ್ಲಿ ತಾಲ್ಲೂಕಿನ ಕಂಚಿನಬಾಗಿಲು ಬಳಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟ್ಯಾಂಕರ್ ನಡುವೆ ಗುರುವಾರ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

ಮಕ್ಕಿಗದ್ದೆಯಿಂದ ಅಂಕೋಲಾ ಕಡೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಬಸ್‌ ಹಿಂದಿಕ್ಕುವ ಭರದಲ್ಲಿ ಟ್ಯಾಂಕರ್ ಬಸ್‌ಗೆ ಬಡಿದಿದ್ದು, ಟ್ಯಾಂಕರ್ ಚಾಲಕ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಶರಣಪ್ಪ ಕೋಳೂರು (30), ಬಸ್ಸಿನಲ್ಲಿದ್ದ ಕೇಣಿ ಗ್ರಾಮದ ಭಾಸ್ಕರ ಪಾಂಡುರಂಗ ಗಾಂವ್ಕರ್ (50) ಮೃತಪಟ್ಟಿದ್ದಾರೆ. 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಮಣಿಪಾಲ, ಹೊನ್ನಾವರ ಮತ್ತು ಕಾರವಾರ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಅಪಘಾತ ವಲಯವಾಗಿರುವ ಕಂಚಿನಬಾಗಿಲು ಪ್ರದೇಶದಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಿ, ಅಪಘಾತ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಸುವುದಾಗಿ ಭರವಸೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.