ಬಿ.ವೈ. ವಿಜಯೇಂದ್ರ
ಯಲ್ಲಾಪುರ: ಮುಖ್ಯಮಂತ್ರಿ ಕುರ್ಚಿ ಅಲ್ಲಾಡಿದಾಗ, ರಾಜ್ಯದಲ್ಲಿ ಬೆಲೆ ಏರಿಕೆ ವಿಚಾರ, ಸರ್ಕಾರದ ದುರಾಡಳಿತದ ಚರ್ಚೆ ಮುನ್ನೆಲೆಗೆ ಬಂದಾಗೆಲ್ಲ ಜಾತಿ ಜನಗಣತಿ ವರದಿ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನೆಲೆಗೆ ತರುತ್ತಿದ್ದಾರೆ. ಇದು ಅವರ ಪಾಲಿಗೆ ಬೆದರು ಗೊಂಬೆಯಂತಾಗಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು.
ಪಟ್ಟಣದಲ್ಲಿ ಜನಾಕ್ರೋಶ ಯಾತ್ರೆ ಕೈಗೊಳ್ಳುವ ಮುನ್ನ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಅವರು ಮಾತನಾಡಿದರು.
'ಜನಸಾಮಾನ್ಯರು ದಿನನಿತ್ಯ ಬಳಸುವ 50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಮಾಡಿದೆ. ಹಾಲಿನಿಂದ, ಕಸದವರೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತುಟ್ಟಿಯಾಗಿದೆ' ಎಂದರು.
'ರಾಜ್ಯದ ಜನ ಬೇಸತ್ತಿದ್ದಾರೆ. ಜನಾಕ್ರೋಶ ಯಾತ್ರೆಯ ಬಿಸಿ ಕಾಂಗ್ರೆಸ್'ಗೆ ತಟ್ಟಿದೆ. ಡಿ.ಕೆ.ಶಿವಕುಮಾರ್ ಏ.17 ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಕರೆ ನೀಡಿದ್ದಾರೆ. ಇದು ಅವರ ಹತಾಶ ಮನೋಭಾವ ತೋರಿಸಿದೆ' ಎಂದರು.
ಜನಾಕ್ರೋಶ ಯಾತ್ರೆಯು ಯಲ್ಲಾಪುರ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಾಗಿ, ವೈಟಿಎಸ್ಎಸ್ ಕಾಲೇಜು ಆವರಣದ ಮೈದಾನದಲ್ಲಿ ಕೊನೆಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.